ಬೆಂಗ್ಳೂರು ಅಲ್ಲ ರಾಜ್ಯವ್ಯಾಪಿ ಜನರಿಂದ ಐಎಂಎಗೆ ಹಣ ಹೂಡಿಕೆ

Public TV
2 Min Read

ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು.

ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಐಎಂಎ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿಲ್ವಂತೆ – ಲಾಭಾಂಶದ ಆಸೆಗೆ ಲಕ್ಷ, ಕೋಟಿ ಕಳೆದುಕೊಂಡ್ರು

ರಾತ್ರಿಯೆಲ್ಲಾ ಪೊಲೀಸರು ದೂರು ಸ್ವೀಕರಿಸಿದ್ದು, ಧೈರ್ಯ ಹೇಳುವ ಕೆಲಸವನ್ನೂ ಮಾಡಿದ್ದಾರೆ. ಜ್ಯುವೆಲ್ಲರಿ ಬಳಿ ಸಾವಿರಾರು ಜನ ಜಮಾಯಿಸಿದ್ದರಿಂದ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅಂದಹಾಗೆ, ಬೆಂಗಳೂರು ಮಾತ್ರ ಅಲ್ಲ, ರಾಜ್ಯಾದ್ಯಂತ ಮೋಸ ಹೋದವರು ಆತಂಕ್ಕೀಡಾಗಿದ್ದಾರೆ. ದಾವಣಗೆರೆಯಲ್ಲಿ ಜನ ಪ್ರತಿಭಟಿಸಿದ್ದಾರೆ.

ದುಪ್ಪಟ್ಟು ಹಣದ ಆಸೆಯಿಂದ ಮಕ್ಕಳ ಶಾಲಾ ಶುಲ್ಕಗೆ ಸಹಾಯ ಆಗುತ್ತದೆ ಎಂದು 4 ಲಕ್ಷ ಹೂಡಿದ್ವಿ. 3 ಪರ್ಸೆಂಟ್ ಬಡ್ಡಿಯಲ್ಲಿ ಜೀವನ ಸಾಗಿಸ್ತಿದ್ವಿ. ಈಗ ನೋಡಿದ್ರೆ ಹಿಂಗಾಯ್ತು ಅಂತ ಸೊಹ್ರಾಬಾನು ಕಣ್ಣೀರು ಹಾಕ್ತಿದ್ದಾರೆ.

ಮೆಕ್ಯಾನಿಕ್ ಕೆಲಸ ಮಾಡುವ ಇಮ್ತಿಯಾಜ್ ಪಾಷಾ, ತಂಗಿಯ ಮದುವೆಗೆ ಅಂತಾ 1.5 ಲಕ್ಷ ಹೂಡಿಕೆ ಮಾಡಿದ್ದರು. ಇದೇ 10 ರಂದು ಹಣ ತೆಗೆಯಲು ಅರ್ಜಿ ಕೂಡ ಹಾಕಿದ್ದರು. ಅಷ್ಟರಲ್ಲಿ ಮನ್ಸೂರ್ ಖಾನ್ ಪರಾರಿ ಸುದ್ದಿ ನೋಡಿ ಕಂಗಾಲಾಗಿದ್ದಾರೆ. ಉಸ್ಮಾನ್ ಮತ್ತು ನಾಸಿರುದ್ದೀನ್ ಪ್ರತೀ ತಿಂಗಳು ಮನೆ ಬಾಡಿಗೆ ಕಟ್ಟಲು ಹಣ ಆಗಲಿ ಎಂದು ಹೂಡಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ವಂಚನೆ ಹೇಗೆ?
ಐಎಂಎ ಜ್ಯುವೆಲ್ಸ್ ನಿಂದ ಚಿನ್ನ, ವಜ್ರ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.

Share This Article
Leave a Comment

Leave a Reply

Your email address will not be published. Required fields are marked *