ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

1 Min Read

ನ್ಯೂಯಾರ್ಕ್: ಅಮೆರಿಕದಲ್ಲಿ (America) ಭಾರಿ ಹಿಮಪಾತವಾಗಿದ್ದು (US Snowstorm), 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

- Advertisement -

ಅಮೆರಿಕದ ಈಶಾನ್ಯ ಭಾಗದಲ್ಲಿ ಮೇರಿಲ್ಯಾಂಡ್‌ನಿಂದ ಮೈನೆವರೆಗೆ ಭಾರಿ ಹಿಮಬಿರುಗಾಳಿ ಅಪ್ಪಳಿಸಿದೆ. ತೀವ್ರವಾದ ಗಾಳಿ ಮತ್ತು ಹಿಮಪಾತದ ಪರಿಣಾಮ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ವ್ಯಾಪಾರ-ವಹಿವಾಟಿಗೆ ಅಡ್ಡಿಯುಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಇದನ್ನೂ ಓದಿ: ಫೆ.26ಕ್ಕೆ ಭಾರತಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ

- Advertisement -

- Advertisement -

ಕಳೆದ ಒಂದು ದಶಕದಲ್ಲಿ ಅತ್ಯಂತ ಪ್ರಬಲವಾದ ಚಂಡಮಾರುತ ಇದು ಎಂದು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ. ಇದು ಮಹಾನಗರದ ಈಶಾನ್ಯದ ಕೆಲವು ಭಾಗಗಳಲ್ಲಿ 2 ಅಡಿ (60 ಸೆಂಟಿಮೀಟರ್) ಗಿಂತ ಹೆಚ್ಚು ಹಿಮವನ್ನು ಸುರಿಸಿದೆ. ಅಧಿಕಾರಿಗಳು ತುರ್ತು ಪರಿಸ್ಥಿತಿಗಳನ್ನು ಘೋಷಿಸಿದ್ದಾರೆ. ಶಾಲೆಗಳನ್ನು ಮುಚ್ಚಲಾಗಿದೆ. ಹಲವೆಡೆ ವಿದ್ಯುತ್‌ ವ್ಯತ್ಯಯವಾಗಿದ್ದು, ಜನರು ಕತ್ತಲಿಲ್ಲ ದಿನದೂಡುವಂತಾಗಿದೆ.

- Advertisement -

ಸೋಮವಾರ ಅಮೆರಿಕದಲ್ಲಿ 5,600 ಕ್ಕೂ ಹೆಚ್ಚು ವಿಮಾನಗಳ ಸೇವೆಯನ್ನು ರದ್ದುಗೊಳಿಸಲಾಗಿದೆ. ಮಂಗಳವಾರ ನಿಗದಿಯಾಗಿದ್ದ ಇನ್ನೂ 2,000 ವಿಮಾನಗಳನ್ನು ರದ್ದುಗೊಳಿಸಲಾಯಿತು. ಸುಮಾರು 2,500 ವಿಮಾನಗಳ ಹಾರಾಟದಲ್ಲಿ ವಿಳಂಬವಾಯಿತು. ಇದನ್ನೂ ಓದಿ: ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್ ಮುಖ್ಯಸ್ಥ ಬಂಧನ

Share This Article