ಮಸೀದಿಗಳ ಮುಂದೆ ಕ್ಯಾಮೆರಾ ಅಳವಡಿಸುವಂತೆ ಓವೈಸಿ ಕರೆ

Public TV
2 Min Read

ಹೈದರಾಬಾದ್: ಮಧ್ಯಪ್ರದೇಶ ಮತ್ತು ದೆಹಲಿಯಲ್ಲಿ ಇತ್ತೀಚೆಗಷ್ಟೇ ನಡೆದ ಕೋಮು ಗಲಭೆಗಳ ನಡುವೆ ಮಸೀದಿಗಳ ಮುಂದೆ ಕ್ಯಾಮೆರಾಗಳನ್ನು ಅಳವಡಿಸುವಂತೆ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕರೆ ನೀಡಿದ್ದಾರೆ.

mosque-loudspeakers

ದೆಹಲಿಯ ಜಹಾಂಗೀರ್‍ಪುರಿ ಮತ್ತು ಸಂಸದ ಖಾರ್ಗೋನ್‍ನಲ್ಲಿ ನಡೆದ ಕೋಮು ಹಿಂಸಾಚಾರದ ಘಟನೆಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, ಧಾರ್ಮಿಕ ಮೆರವಣಿಗೆಗಳನ್ನು ರೆಕಾರ್ಡ್ ಮಾಡಲು ಮಸೀದಿಗಳ ಬಳಿ ಹೆಚ್ಚಿನ ರೆಸಲ್ಯೂಶನ್ ಕ್ಯಾಮೆರಾಗಳನ್ನು ಅಳವಡಿಸಬೇಕು. ಇದರಿಂದ ಯಾರು ಕಲ್ಲು ತೂರಾಟ ನಡೆಸುತ್ತಿದ್ದಾರೆಂದು ಜನರು ತಿಳಿಯಬಹುದು ಎಂದಿದ್ದಾರೆ.

ಈ ಮುನ್ನ ಶನಿವಾರ ಹೈದರಾಬಾದ್‍ನಲ್ಲಿ ಮಾತನಾಡಿದ ಅಸಾದುದ್ದೀನ್ ಓವೈಸಿ ಅವರು, ಜ್ಞಾನವಾಪಿ-ಶೃಂಗಾರ್ ಗೌರಿ ಸಂಕೀರ್ಣದ ಕೆಲವು ಪ್ರದೇಶಗಳನ್ನು ಸಮೀಕ್ಷೆ ನಡೆಸುವಂತೆ ವಾರಣಾಸಿ ನ್ಯಾಯಾಲಯವು ಇತ್ತೀಚಿಗೆ ನೀಡಿದೆ ಆದೇಶವನ್ನು ಖಂಡಿಸಿದ್ದರು. ಈ ಆದೇಶವು ರಥಯಾತ್ರೆಯ ರಕ್ತಪಾತ ಮತ್ತು 1980-1990ರ ಮುಸ್ಲಿಂ ವಿರೋಧಿ ಹಿಂಸಾಚಾರಕ್ಕೆ ದಾರಿ ಮಾಡಿಕೊಡುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವಿವಾದವನ್ನು ಹುಟ್ಟು ಹಾಕಿರುವ ಬಿಜೆಪಿ ಮತ್ತುಆರ್‌ಎಸ್‍ಎಸ್ ಉಭಯ ಕೋಮಿನಲ್ಲಿ ದ್ವೇಷವನ್ನು ಮೂಡಿಸುತ್ತಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮಸೀದಿಗಳ ಮೈಕ್ ತೆರವಿಗೆ ನಾಳೆಯೇ ಡೆಡ್‍ಲೈನ್ – ದೇಗುಲಗಳಲ್ಲಿ 3 ಬಾರಿ ಮಂತ್ರ ಘೋಷ

ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ-1991ರ ಪ್ರಕಾರ ಧಾರ್ಮಿಕ ಕೇಂದ್ರಗಳಿಗೆ ಯಾವುದೇ ತೊಂದರೆ ಉಂಟು ಮಾಡಬಾರದು ಎಂದು ಹೇಳಿದೆ. ಇದನ್ನು ಭಾರತ ಸರ್ಕಾರ ಕೂಡ ಅಂಗೀಕರಿಸಿದೆ. ಈ ಬಗ್ಗೆ ಸರ್ಕಾರ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕಡಬೇಕಿತ್ತು. ಆದರೆ, ಬಿಜೆಪಿ ಸರ್ಕಾರ ಇದರಲ್ಲಿ ಮೌನ ವಹಿಸಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿಯ ನಮ್ಮ ಮನೆ ಎಕ್ಸ್‌ಪೋಗೆ ಸಖತ್ ಸ್ಪಂದನೆ – ಇಂದೇ ಕಡೇ ದಿನ, ತಪ್ಪದೇ ಬನ್ನಿ

Share This Article
Leave a Comment

Leave a Reply

Your email address will not be published. Required fields are marked *