ಪದ್ಮಶ್ರೀ ಪುರಸ್ಕೃತ 90 ವಯಸ್ಸಿನ ಕಲಾವಿದನನ್ನು ಸರ್ಕಾರಿ ಮನೆಯಿಂದ ಹೊರಹಾಕಿದ ಕೇಂದ್ರ

Public TV
2 Min Read

ನವದೆಹಲಿ: ಕೆಲ ವರ್ಷಗಳಿಂದ ಸರ್ಕಾರಿ ನಿವಾಸಗಳಲ್ಲಿ ವಾಸವಾಗಿದ್ದ 90 ವರ್ಷ ವಯಸ್ಸಿನ ಪದ್ಮಶ್ರೀ ಪುರಸ್ಕೃತ ಒಡಿಸ್ಸಿ ನೃತ್ಯಗಾರ ಗುರು ಮಾಯಾಧರ್ ರಾವತ್ ಅವರನ್ನು ಕೇಂದ್ರ ಸರ್ಕಾರ ಮನೆಯಿಂದ ಹೊರಹಾಕಲಾಗಿದೆ.

ಇವರಂತೆಯೇ ಸರ್ಕಾರಿ ವಸತಿಗಳಲ್ಲಿ ವಾಸವಾಗಿದ್ದ ಎಂಟು ಮಂದಿ ಪ್ರಖ್ಯಾತ ಕಲಾವಿದರಿಗೆ ಮನೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ನೋಟಿಸ್‌ ನೀಡಲಾಗಿದೆ. ಫೆಬ್ರವರಿಯೊಳಗೆ ಆದೇಶ ಪಾಲನೆಯಾಗದಿದ್ದಲ್ಲಿ ಕಲಾವಿದರ ವಿಚಾರವಾಗಿ ಮುಕ್ತ ಕ್ರಮಕೈಗೊಳ್ಳಲು ಕೇಂದ್ರಕ್ಕೆ ಅಧಿಕಾರವಿದೆ ಎಂದು ದೆಹಲಿ ಹೈಕೋರ್ಟ್‌ ಸ್ಪಷ್ಟಪಡಿಸಿತ್ತು. ಇದನ್ನೂ ಓದಿ: 10,900 ಅಕ್ರಮ ಧ್ವನಿವರ್ಧಕಗಳ ತೆರವು

ಕಲಾವಿದರಿಗೆ ಕೆಲ ವರ್ಷಗಳ ಹಿಂದೆ ಸರ್ಕಾರಿ ವಸತಿಗಳನ್ನು ಮಂಜೂರು ಮಾಡಲಾಗಿತ್ತು. ಆದರೆ ಮಂಜೂರಾತಿಯನ್ನು 2014ರಲ್ಲಿ ರದ್ದುಗೊಳಿಸಲಾಯಿತು. ಪರಿಣಾಮವಾಗಿ ಎಲ್ಲರೂ ವಸತಿಗಳನ್ನು ಖಾಲಿ ಮಾಡಬೇಕು ಎಂದು ನೋಟಿಸ್‌ ನೀಡಲಾಯಿತು. 90 ವರ್ಷ ವಯಸ್ಸಿನ ಒಡಿಸ್ಸಿ ನೃತ್ಯಗಾರ ರಾವುತ್‌ ಅವರನ್ನು ವಸತಿಯಿಂದ ಹೊರಹಾಕಿದ ನಂತರ ಉಳಿದ ಕಲಾವಿದರಿಗೂ ನೋಟಿಸ್‌ ನೀಡಲಾಗಿದೆ. ಮೇ 2ರೊಳಗೆ ನಿವಾಸ ಖಾಲಿ ಮಾಡುವಂತೆ ಅವರಿಗೆ ಗಡುವು ನೀಡಲಾಗಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಹಲವು ಬಾರಿ ನೋಟಿಸ್‌ ಕೊಟ್ಟರೂ 28 ಕಲಾವಿದರ ಪೈಕಿ ಸುಮಾರು ಎಂಟು ಮಂದಿ ಇನ್ನೂ ತಮ್ಮ ಸರ್ಕಾರಿ ವಸತಿಗಳನ್ನು ಖಾಲಿ ಮಾಡಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಲಾಲ್‌ ಮಾಂಸ, ಮಸೀದಿಗಳಲ್ಲಿ ಧ್ವನಿವರ್ಧಕ ಏಕೆ ನಿಷೇಧಿಸಬೇಕು: ಒಮರ್‌ ಅಬ್ದುಲ್ಲಾ ಪ್ರಶ್ನೆ

ಈ ಎಂಟು ಕಲಾವಿದರು ತಮ್ಮ ವಸತಿಗಳನ್ನು ಖಾಲಿ ಮಾಡುವ ಪ್ರಕ್ರಿಯೆಯಲ್ಲಿದ್ದಾರೆ. ಮೇ 2 ರೊಳಗೆ ನಿವಾಸ ಖಾಲಿ ಮಾಡುವುದಾಗಿ ಲಿಖಿತವಾಗಿ ಭರವಸೆ ನೀಡಿದ್ದು, ಅಲ್ಲಿಯವರೆಗೆ ಕಾಲಾವಕಾಶ ನೀಡಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ.

ತಿಂಗಳಿಗೆ 20,000 ರೂ.ಗಿಂತ ಕಡಿಮೆ ಗಳಿಸುವ 40 ಕಲಾವಿದರಿಗೆ ಸಂಸ್ಕೃತಿ ಸಚಿವಾಲಯದ ಶಿಫಾರಸಿನ ಮೇರೆಗೆ ಜನರಲ್‌ ಪೂಲ್‌ ವಸತಿ ಸೌಕರ್ಯ ವಿಶೇಷ ಕೋಟಾದಡಿ ವಸತಿ ಮಂಜೂರು ಮಾಡಲಾಗಿತ್ತು. ಇದನ್ನೂ ಓದಿ: ಕೊರೊನಾ ಇನ್ನೂ ಮುಗಿದಿಲ್ಲ, ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಿ: ಉದ್ಧವ್ ಠಾಕ್ರೆ

ವಸತಿ ಖಾಲಿ ಮಾಡಲು ಕೇಂದ್ರವು 2020 ರ ಡಿಸೆಂಬರ್ 31ಕ್ಕೆ ಗಡುವನ್ನು ನೀಡಿತ್ತು. ಆದರೆ ಅರ್ಜಿಗಳನ್ನು ಸಲ್ಲಿಸಿದ ನಂತರ ಹೈಕೋರ್ಟ್, ಕೇಂದ್ರದ ನೋಟಿಸ್‌ಗೆ ತಡೆ ನೀಡಿತ್ತು.

Share This Article
Leave a Comment

Leave a Reply

Your email address will not be published. Required fields are marked *