ಪಹಲ್ಗಾಮ್ ದಾಳಿ ಭಯೋತ್ಪಾದನೆ ಮರುಸ್ಥಾಪಿಸುವ ಯತ್ನ: ಬೊಮ್ಮಾಯಿ

Public TV
1 Min Read

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ದಾಳಿ ಮಾಡಿರುವುದು ಇದೊಂದು ಹೇಯ ಕೃತ್ಯ ಮತ್ತು ಇದು ಭಯೋತ್ಪಾದನೆ ಮರುಸ್ಥಾಪಿಸುವ ಪ್ರಯತ್ನ. ಇದನ್ನು ಪ್ರತಿಯೊಬ್ಬ ನಾಗರಿಕರು ಖಂಡಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.ಇದನ್ನೂ ಓದಿ: ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗಲ್ಲ, ದಾಳಿಕೋರರನ್ನು ಸುಮ್ಮನೆ ಬಿಡಲ್ಲ: ಗುಡುಗಿದ ಮೋದಿ

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಧರ್ಮದ ಹೆಸರು ಕೇಳಿ ಗುಂಡು ಹಾರಿಸಿರುವುದು ಭಾರತದ ವಿರೋಧಿ ಶಕ್ತಿಗಳ ಕೈವಾಡ ಇರುವುದು ಬಹಳ ಸ್ಪಷ್ಟ. ಇದನ್ನು ಕೂಡಲೇ ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಮಟ್ಟ ಹಾಕಬೇಕು. ಜಮ್ಮು ಕಾಶ್ಮೀರ ಕಣಿವೆಯಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ರಾಜ್ಯ ಸರ್ಕಾರ ಎಲ್ಲ ವ್ಯವಸ್ಥೆಯನ್ನು ಮಾಡಬೇಕು. ಘಟನೆಯಲ್ಲಿ ಮೃತರಾದವರ ಕುಟುಂಬಸ್ಥರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಭಗವಂತ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಏನಿದು ಘಟನೆ?
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶಿವಮೊಗ್ಗದ ಪ್ರವಾಸಿಗರೊಬ್ಬರು ಸಾವಿಗೀಡಾಗಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದರು.ಇದನ್ನೂ ಓದಿ: ಮುಗ್ಧರನ್ನು ಕೊಲ್ಲುವುದು ದುಷ್ಟತನ- ಪಹಲ್ಗಾಮ್‌ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

Share This Article