ಪಹಲ್ಗಾಮ್‌ ದಾಳಿಯಲ್ಲಿ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಬಂಧನ

Public TV
1 Min Read

ಶ್ರೀನಗರ: ಏಪ್ರಿಲ್ 22 ರ ಪಹಲ್ಗಾಮ್ ದಾಳಿ (Pahalgam Attack) ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ (Jammu & Kashmir) ಪೊಲೀಸರು ಬಂಧಿಸಿದ್ದಾರೆ.

ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಕಣಿವೆಯಲ್ಲಿ 26 ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಭದ್ರತಾ ಪಡೆಗಳು ಆಪರೇಷನ್ ಮಹಾದೇವ್ ಸಮಯದಲ್ಲಿ ಪಹಲ್ಗಾಮ್‌ ದಾಳಿಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿ, ಶಸ್ತ್ರಾಸ್ತ್ರಗಳು ಮತ್ತು ಸಲಕರಣೆಗಳನ್ನು ವಶಪಡಿಸಿಕೊಂಡಿದ್ದರು. ಅವುಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಯ ನಂತರ ಮೊಹಮ್ಮದ್ ಕಟಾರಿಯಾ ಎಂಬಾತನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪಹಲ್ಗಾಮ್‌ ಪಾತಕಿಗಳ ಪತ್ತೆಗೆ ನೆರವಾಯ್ತು ಬುಲೆಟ್‌ ಶೆಲ್‌ ಟೆಸ್ಟಿಂಗ್‌ – ಬ್ಯಾಲಿಸ್ಟಿಕ್ಸ್‌ ಮ್ಯಾಚಿಂಗ್‌ ಹೇಗೆ ನಡೆಯುತ್ತೆ?

ಕಟಾರಿಯಾನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ದಾಳಿಗೆ ಕಾರಣರಾದ ಎಲ್ಲರನ್ನು ಪತ್ತೆಹಚ್ಚುವಲ್ಲಿ ಸರ್ಕಾರ ನಿರಂತರ ಗಮನಹರಿಸುತ್ತಿದೆ ಎಂಬುದನ್ನು ಇದು ಒತ್ತಿ ಹೇಳುತ್ತದೆ.

ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ಒಂದು ಬಣವು ಪಹಲ್ಗಾಮ್‌ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಶ್ರೀನಗರ ಬಳಿಯ ಡಚಿಗಮ್‌ನಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮೇ 22 ರಂದು ಭದ್ರತಾ ಪಡೆಗಳಿಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು. ಅದರ ಬೆನ್ನಲ್ಲೇ ಆಪರೇಷನ್ ಮಹಾದೇವ್ ನಡೆಸಲಾಯಿತು. ಇದನ್ನೂ ಓದಿ: ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್‌ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್‌

Share This Article