Pahalgam Terror Attack | ಉಗ್ರರ ದಾಳಿಗೆ ಬೆಂಗಳೂರಿನ ಮಧುಸೂದನ್‌ ಬಲಿ

Public TV
1 Min Read

ಬೆಂಗಳೂರು: ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ (Pahalgam) ಕಣಿವೆಯಲ್ಲಿ ಉಗ್ರರು ನಡೆಸಿದ ನಡೆದ ಹಿಂದೂಗಳ ನರಮೇಧದಲ್ಲಿ ಬೆಂಗಳೂರಿನ ಮಧುಸೂದನ್‌ (Madhusudhan) ಬಲಿಯಾಗಿದ್ದಾರೆ.

ಮೂಲತಃ ಆಂಧ್ರದ ನೆಲ್ಲೂರಿನವರಾದ ಮಧುಸೂದನ್‌ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದರು. ಎರಡು ದಿನದ ಹಿಂದೆ ಕಾಶ್ಮೀರಕ್ಕೆ ಕುಟುಂಬ ತೆರಳಿತ್ತು. ಇದನ್ನೂ ಓದಿ: ಪುತ್ರನಿಗೆ ದ್ವಿತೀಯ ಪಿಯುಸಿಯಲ್ಲಿ 97% ಅಂಕ – ಸಂಭ್ರಮಾಚರಣೆಗೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್ ಕುಟುಂಬ

 

ಮಧುಸೂದನ್‌ ಅವರ ಸಾವಿನೊಂದಿಗೆ ಕರ್ನಾಟಕ ಮೂವರು ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಈಗಾಗಲೇ ಶಿವಮೊಗ್ಗದ ಮಂಜುನಾಥ್‌ ರಾವ್‌, ಬೆಂಗಳೂರಿನ ಭರತ್‌ ಮೃತಪಟ್ಟಿದ್ದಾರೆ.

ಉಗ್ರರ ಪೈಶಾಚಿಕ ಕೃತ್ಯಕ್ಕೆ ಒಟ್ಟು 26 ಮಂದಿ ಬಲಿಯಾಗಿದ್ದು. ಕಣ್ಣೆದುರು ಅನೇಕರು, ತಂದೆ, ಪತಿಯನ್ನ ಕಳೆದುಕೊಂಡಿದ್ದಾರೆ. ಉಗ್ರರ ಅಮಾನವೀಯ ನಡೆಗೆ, ಅಮಾಯಕ ಜೀವಗಳ ಪ್ರಾಣ ಪಕ್ಷಿ ಹಾರಿ ಹೋಗಿವೆ.

Share This Article