ನವದೆಹಲಿ: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯ ಸಂದರ್ಭದಲ್ಲಿ ಪಾಕಿಸ್ತಾನದ 100ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ (Lt Gen Rajiv Ghai) ಹೇಳಿದ್ದಾರೆ.
ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳಿಗೆ ಸೈನ್ಯವನ್ನು ಕೊಡುಗೆ ನೀಡುವ 34 ರಾಷ್ಟ್ರಗಳ ಸೇನಾ ಮುಖ್ಯಸ್ಥರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಭಾರೀ ಪ್ರಮಾಣದ ಮಿಲಿಟರಿ ನಷ್ಟವನ್ನು ಅನುಭವಿಸಿದೆ. ನಾಲ್ಕು ದಿನಗಳ ಸಂಘರ್ಷದ ಸಮಯದಲ್ಲಿ ಪಾಕಿಸ್ತಾನದ(Pakistan) ಕನಿಷ್ಠ 12 ವಿಮಾನಗಳನ್ನು ಕಳೆದುಕೊಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಟಾಟಾ ಮೋಟಾರ್ಸ್ ಷೇರು ಮೌಲ್ಯ 40% ಕುಸಿತವಾದ್ರೂ ಆತಂಕ ಪಡೋ ಅಗತ್ಯವಿಲ್ಲ: ನಿಜವಾಗಿ ಆಗಿದ್ದೇನು?
VIDEO | Delhi: “In the strikes carried out in the early hours of May 7, more than 100 terrorists were neutralised,” says Deputy Chief of Army Staff Lt Gen Rajiv Ghai.
(Full video available on PTI Videos –https://t.co/n147TvqRQz) pic.twitter.com/BTlygoSfA7
— Press Trust of India (@PTI_News) October 14, 2025
ಸಾವುನೋವುಗಳಿಗೆ ಸಾಕ್ಷಿಯಾಗಿ ಪಾಕಿಸ್ತಾನದ ಮರಣೋತ್ತರ ಮಿಲಿಟರಿ ಪ್ರಶಸ್ತಿಗಳ ಪಟ್ಟಿಯನ್ನು ಉಲ್ಲೇಖಿಸಿದ ಅವರು, ಆಗಸ್ಟ್ 14 ರಂದು ಪಾಕಿಸ್ತಾನವು ತಿಳಿಯದೆಯೇ ಈ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿರಬಹುದು. ಅವರು ನೀಡಿದ ಮರಣೋತ್ತರ ಪ್ರಶಸ್ತಿಗಳ ಸಂಖ್ಯೆಯಿಂದ ಗಡಿಯಲ್ಲಿ ಸಾವನ್ನಪ್ಪಿದ ಸೈನಿಕರ ಸಂಖ್ಯೆ 100 ಕ್ಕಿಂತ ಹೆಚ್ಚಿವೆ ಎಂಬುದನ್ನು ಸೂಚಿಸುತ್ತಿವೆ ಎಂದರು.
ನಾವು ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿದ್ದೆವು. ಆದರೆ ಪಾಕಿಸ್ತಾನ ಈ ದಾಳಿಗೆ ಪ್ರತಿಯಾಗಿ ನಮ್ಮ ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದಕ್ಕೆ ಪ್ರತಿ ದಾಳಿ ನಡೆಸಿದೆವು. ನಾವು ಅವರ 11 ವಾಯು ನೆಲೆಗಳನ್ನು ಹೊಡೆದು ಹಾಕಿದ್ದೇವೆ. ನಾಲ್ಕು ರಾಡಾರ್‌ಗಳನ್ನು ಧ್ವಂಸ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಹಾರ ಚುನಾವಣೆಗೆ 71 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ – ಸ್ಪೀಕರ್‌ಗೆ ಕೊಟ್ಟಿಲ್ಲ ಟಿಕೆಟ್