ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕಾರಗೊಂಡರೆ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ಮುಖ್ಯಸ್ಥ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆ ಮಾಡಲಿದೆ.
ಈ ಕುರಿತಂತೆ ಇಸ್ಲಾಮಾಬಾದ್ ಹೈಕೋರ್ಟ್‍ನ ಹೊರಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿಎಂಎಲ್-ಎನ್ ಉಪಾಧ್ಯಕ್ಷೆ ಮರ್ಯಮ್ ನವಾಜ್ ಅವರು, ಪಾಕಿಸ್ತಾನದ ಪ್ರತಿಪಕ್ಷಗಳು ಪ್ರಧಾನ ಮಂತ್ರಿಯ ಮುಂದಿನ ಅಭ್ಯರ್ಥಿಯ ನೇಮಕಾತಿಯ ಬಗ್ಗೆ ಕುಳಿತು ಚರ್ಚಿಸಿ ನಿರ್ಧರಿಸುತ್ತದೆ. ಆದರೆ ಪಿಎಂಎಲ್-ಎನ್ ಶೆಹಬಾಜ್ ಷರೀಫ್ ಅವರನ್ನು ನಾಮನಿರ್ದೇಶನ ಮಾಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಮ್ರಾನ್‍ಖಾನ್ ಕುರ್ಚಿಗೆ ಇಕ್ಕಟ್ಟು: ಮಾರ್ಚ್ 28ಕ್ಕೆ ಭವಿಷ್ಯ ನಿರ್ಧಾರ
ಇಮ್ರಾನ್ ಖಾನ್ ನಿಮ್ಮ ಆಟ ಮುಗಿದಿದೆ. ಆಡಳಿತಾರೂಢ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುರಿದು ಬಿದ್ದಿದೆ. ಆಟದಲ್ಲಿ ಸೋತ ಬಳಿಕ ಯಾರೂ ತನ್ನ ರಕ್ಷಣೆಗೆ ಬರುವುದಿಲ್ಲ ಎಂದು ನಿಮಗೆ ತಿಳಿದಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು
ಇದೇ ವೇಳೆ ತನ್ನ ವಿರುದ್ಧ ಅಂತರರಾಷ್ಟ್ರೀಯ ಪಿತೂರಿ ಇದೆ ಎಂದು ಇಮ್ರಾನ್ ಖಾನ್ ಆರೋಪಿಸುತ್ತಿದ್ದಾರೆ. ಆದರೆ ನಿಜವಾಗಿಯೂ ಇಮ್ರಾನ್ ಖಾನ್ ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.