15 ದಿನದ ಮಗಳನ್ನ ಜೀವಂತ ಸಮಾಧಿ ಮಾಡಿದ ತಂದೆ!

Public TV
1 Min Read

ಇಸ್ಲಾಮಾಬಾದ್:‌ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹೇಯ ಘಟನೆಯೊಂದು ಬೆಳಕಿಗೆ ಬಂದಿದೆ. ಪಾಪಿ ತಂದೆಯೊಬ್ಬ ತನ್ನ 5 ದಿನದ ಮಗಳನ್ನೇ ಜೀವಂತ ಸಮಾಧಿ ಮಾಡಿದ ಘಟನೆ ಪಾಕಿಸ್ತಾನದಲ್ಲಿ (Pakistan) ನಡೆದಿದೆ.

ಪ್ರಕರಣ ಸಂಬಂಧ ಆರೋಪಿ ತಂದೆ ತಯ್ಯಬ್ ನನ್ನು ಬಂಧಿಸಲಾಗಿದೆ. ವಿಚಾರಣೆಯ ವೇಳೇ ಈತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ರಾಜ್ಯದ ಕರಾವಳಿಯಲ್ಲಿ ಮಳೆ, ಪ್ರವಾಹ, ಭೂಕುಸಿತ- ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟ

ಆರ್ಥಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಮಗಳನ್ನು ಈ ರೀತಿ ಮಾಡಿರುವುದಾಗಿ ತಯ್ಯಬ್‌ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ. ನವಜಾತ ಮಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿರುವ ಆತ, ನವಜಾತ ಶಿಶುವನ್ನು ಹೂಳುವ ಮುನ್ನ ಗೋಣಿಚೀಲದಲ್ಲಿ ತುಂಬಿದ್ದಾಗಿ ತಯ್ಯಬ್ ಒಪ್ಪಿಕೊಂಡಿದ್ದಾನೆ.

ತಯ್ಯಬ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನ್ಯಾಯಾಲಯದ ಸೂಚನೆಯಂತೆ ಸಮಾಧಿಯಿಂದ ಬಾಲಕಿಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article