ಭಾರತದಲ್ಲಿ ಭೀಕರ ರೈಲು ದುರಂತ ಕಂಡು ತುಂಬಾ ದುಃಖವಾಗಿದೆ – ಪಾಕಿಸ್ತಾನ, ತಾಲಿಬಾನ್‌ ಸಂತಾಪ

Public TV
1 Min Read

ಇಸ್ಲಾಮಾಬಾದ್‌: ಭಾರತದ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ (Odisha Train Crash) ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆಯಾಗಿದ್ದು 900ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ 650ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.

ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ತ್ರಿಪಲ್‌ ರೈಲು ದುರಂತಕ್ಕೆ ಪಾಕಿಸ್ತಾನ (Pakistan) ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಜರ್ದಾರಿ (Bilawal Bhutto Zardari) ಹಾಗೂ ಅಫ್ಘಾನಿಸ್ತಾನದ ತಾಲಿಬಾನ್‌ನ (Taliban) ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂತಾಪ ಸೂಚಿಸಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತ ಹೇಗಾಯ್ತು..? ಘಟನೆಗೆ ಕಾರಣ ಏನು..?

ಭಾರತದ ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಹೆಚ್ಚಿನ ಸಾವು ನೋವಾಗಿರುವುದು ತಿಳಿದು ದುಃಖವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ಕೊಡಲಿ. ರೈಲು ದುರಂತದಲ್ಲಿ ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಶುಭ ಹಾರೈಸಿವೆ. ಅಷ್ಟೇ ಅಲ್ಲದೇ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ, ಬ್ರಿಟನ್‌ ಪ್ರಧಾನಿ ರಿಷಿ ಸುನಾಕ್‌ ಸೇರಿದಂತೆ ದೇಶ-ವಿದೇಶ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ದೊಡ್ಡಮಟ್ಟದ ಸದ್ದು ಕೇಳಿಬಂತು; ದುರಂತದ ಘನಘೋರ ದೃಶ್ಯ ಬಿಚ್ಚಿಟ್ಟ ಕನ್ನಡಿಗ

Share This Article