Pakistan Train Accident: ಭೀಕರ ರೈಲು ದುರಂತ – 20 ಮಂದಿ ಸಾವು, 80 ಮಂದಿಗೆ ಗಾಯ

Public TV
2 Min Read

ಇಸ್ಲಾಮಾಬಾದ್‌: ಕರಾಚಿಯಿಂದ (Karachi) ರಾಲ್ಪಿಂಡಿಗೆ ತೆರಳುತ್ತಿದ್ದ ಹಜಾರಾ ಎಕ್ಸ್‌ಪ್ರೆಸ್‌ (Hazara Express) ರೈಲು ಭೀಕರ ದುರಂತಕ್ಕೀಡಾಗಿದೆ. ಘಟನೆಯಲ್ಲಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಪಾಕಿಸ್ತಾನದ (Pakistan) ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.

ಕರಾಚಿಯಿಂದ 275 ಕಿಲೋ ಮೀಟರ್ ದೂರದಲ್ಲಿರುವ ರಾವಲ್ಪಿಂಡಿಗೆ (Rawalpindi) ತೆರಳುತ್ತಿದ್ದ ಹಜಾರಾ ಎಕ್ಸ್‌ಪ್ರೆಸ್‌ ರೈಲಿನ ಒಟ್ಟು 10 ಬೋಗಿಗಳು ಹಳಿ ತಪ್ಪಿದೆ. ಘಟನೆಯಲ್ಲಿ ಈವೆರೆಗೆ 20 ಮಂದಿ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆದ್ರೆ ಘಟನೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಪ್ರಧಾನಿ ಅರೆಸ್ಟ್ – ಇಮ್ರಾನ್ ಖಾನ್‌ಗೆ 3 ವರ್ಷ ಜೈಲು, 5 ವರ್ಷ ರಾಜಕೀಯದಿಂದ ಬ್ಯಾನ್

ರೈಲ್ವೆ ಆಡಳಿತ ಮಂಡಳಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಪಾಕಿಸ್ತಾನ ಸೇನೆ ಕೂಡ ಕಾರ್ಯಾಚರಣೆಗೆ ಕೈಜೋಡಿಸಿದ್ದು, ಸಮೀಪದ ನೆಲೆಗಳಿಂದ ಹೆಚ್ಚಿನ ಸೈನಿಕರನ್ನ ಕರೆಸಿಕೊಳ್ಳಲಾಗಿದೆ. ಘಟನಾ ಸ್ಥಳಕ್ಕೆ ಸಮೀಪದಲ್ಲಿರುವ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಇತರ ಪ್ರಯಾಣಿಕರನ್ನ ನಿಗದಿತ ಸ್ಥಳಕ್ಕೆ ತಲುಪಿಸಲು ಪರ್ಯಾಯ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸ್ಥಳೀಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ

ಎರಡು ತಿಂಗಳ ಹಿಂದೆಯಷ್ಟೇ ಒಡಿಶಾ ರಾಜ್ಯದಲ್ಲಿ ನಡೆದ ಭೀಕರ ರೈಲು ದುರಂತ (Odisha Train Accident) ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು. ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲು ಜೂನ್ 2ರ ಸಂಜೆ ಸರಕುಗಳ ರೈಲಿಗೆ ಡಿಕ್ಕಿ ಹೊಡೆದು ಅದರ ಹೆಚ್ಚಿನ ಕೋಚ್‍ಗಳು ಹಳಿತಪ್ಪಿದ್ದವು. ಈ ಅಪಘಾತದಲ್ಲಿ ಸುಮಾರು 288 ಮಂದಿ ಸಾವನ್ನಪ್ಪಿದ್ದರು ಅಲ್ಲದೇ 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಪಾಕಿಸ್ತಾನದಲ್ಲಿ ಸಂಭವಿಸಿರುವ ದುರಂತದಲ್ಲಿ ಸಂತ್ರಸ್ತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್