ಪಾಕಿಸ್ತಾನದಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಪ್ರಯಾಣಿಕರಿದ್ದ ರೈಲು ಡಿಕ್ಕಿ – 30 ಮಂದಿಗೆ ಗಾಯ

Public TV
1 Min Read

ಇಸ್ಲಾಮಾಬಾದ್: ನಿಂತಿದ್ದ ಗೂಡ್ಸ್‌ ರೈಲಿಗೆ ಪ್ರಯಾಣಿಕರಿದ್ದ ರೈಲು ಡಿಕ್ಕಿ ಹೊಡೆದು 30 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ (Pakistan Train Crash) ಪೂರ್ವ ಪಂಜಾಬ್‌ ಪ್ರಾಂತ್ಯದಲ್ಲಿ ನಡೆದಿದೆ.

ಲಾಹೋರ್‌ಗೆ ಹೋಗುತ್ತಿದ್ದ ಪ್ಯಾಸೆಂಜರ್ ರೈಲಿನ ಚಾಲಕ, ಆತನ ಸಹಾಯಕ ಮತ್ತು ಇಬ್ಬರು ಗ್ರೌಂಡ್ ಸಿಬ್ಬಂದಿಯನ್ನು ನಿರ್ಲಕ್ಷ್ಯದ ಕಾರಣಕ್ಕೆ ರೈಲ್ವೇ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ ಎಂದು ರೈಲ್ವೆಯ ಉನ್ನತ ಅಧಿಕಾರಿ ಶಾಹಿದ್ ಅಜೀಜ್ ತಿಳಿಸಿದ್ದಾರೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ಸಿಗರೇಟ್ ಬ್ಯಾನ್ ಮಾಡಲಿದ್ದಾರಾ ರಿಷಿ ಸುನಾಕ್?

ಮಿಯಾನ್‌ವಾಲಿಯಿಂದ ಲಾಹೋರ್‌ಗೆ ಹೊರಟಿದ್ದ ಪ್ರಯಾಣಿಕರಿದ್ದ ರೈಲನ್ನು ಗೂಡ್ಸ್ ರೈಲು ನಿಂತಿದ್ದ ಟ್ರ್ಯಾಕ್‌ನಲ್ಲಿ ಹೋಗಲು ನಿರ್ದೇಶಿಸಲಾಗಿದೆ. ಹೀಗಾಗಿ ಇಂದು ಮುಂಜಾನೆ ಕಿಲಾ ಸತ್ತಾರ್ ಶಾ ನಿಲ್ದಾಣದ ಬಳಿ ಶೈಖುಪುರ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಪಾಕ್ ಅಧಿಕಾರಿ ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಹೆಚ್ಚಿನವರಿಗೆ ರೈಲು ನಿಲ್ದಾಣದಲ್ಲೇ ಚಿಕಿತ್ಸೆ ನೀಡಲಾಯಿತು. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಹಳಿಗಳನ್ನು ತಕ್ಷಣ ತೆರವುಗೊಳಿಸಲಾಯಿತು. ದಶಕಗಳಷ್ಟು ಹಳೆಯದಾದ ಸಿಗ್ನಲ್ ವ್ಯವಸ್ಥೆ ಮತ್ತು ಹಳಿಗಳಿಂದಾಗಿ ಪಾಕಿಸ್ತಾನದಲ್ಲಿ ಇಂತಹ ಅಪಘಾತಗಳು ಸಾಮಾನ್ಯವಾಗಿದೆ. ಇದನ್ನೂ ಓದಿ: Asian Games 2023: ಅರುಣಾಚಲ ಪ್ರದೇಶದ ಮೂವರು ಅಥ್ಲೆಟ್‌ಗಳಿಗೆ ಪ್ರವೇಶ ನಿರಾಕರಿಸಿದ ಚೀನಾ

ಜೂನ್‌ನಲ್ಲಿ ಸಿಂಧ್ ಪ್ರಾಂತ್ಯದ ಘೋಟ್ಕಿ ನಗರದ ಬಳಿ ರೈಲು ಹಳಿತಪ್ಪಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಕನಿಷ್ಠ 150 ಜನರು ಗಾಯಗೊಂಡಿದ್ದರು. ಹಳಿ ತಪ್ಪಲು ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ತನಿಖೆಯಾಗುತ್ತಿದೆ. ಆದರೆ ಮುರಿದ ಹಳಿ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್