ಪಬ್‍ಜಿ ಗೆಳೆಯನ ಭೇಟಿಗೆ 4 ಮಕ್ಕಳೊಂದಿಗೆ ಭಾರತಕ್ಕೆ ಬಂದ ಪಾಕ್ ಮಹಿಳೆ!

By
1 Min Read

ಲಕ್ನೋ: 4 ಮಕ್ಕಳೊಂದಿಗೆ ಭಾರತಕ್ಕೆ ಬಂದು ಗ್ರೇಟರ್ ನೋಯ್ಡಾದಲ್ಲಿ (Greater Noida) ಅಕ್ರಮವಾಗಿ ನೆಲೆಸಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಿಳೆ ತನ್ನ ಜೊತೆ ಪಬ್ ಜಿ (PUBG) ಆಟವಾಡುತ್ತಿದ್ದ ನೊಯ್ಡಾ ವ್ಯಕ್ತಿಯನ್ನು ಭೇಟಿ ಮಾಡಲು ಭಾರತಕ್ಕೆ (India) ಬಂದು ನೆಲೆಸಿದ್ದಳು. ಈ ಹಿನ್ನೆಲೆಯಲ್ಲಿ ಮಕ್ಕಳ ಜೊತೆ ಮಹಿಳೆ ಹಾಗೂ ಆಕೆಯ ಗೆಳೆಯನನ್ನು ಕೂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನಿ (Pakisthan Woman) ಮಹಿಳೆ ಹಾಗೂ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದೇವೆ. ಮಹಿಳೆಯ 4 ಮಕ್ಕಳು ಕೂಡ ಜೈಲಿನಲ್ಲಿದ್ದಾರೆ ಎಂದು ಗ್ರೇಟರ್ ನೊಯ್ಡಾ ಪೊಲೀಸ್ ಉಪಾಯುಕ್ತ ಸಾದ್ ಮಿಯಾ ಖಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಪತಿ, ಆತನ ಗರ್ಲ್‍ಫ್ರೆಂಡ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

ಪಾಕಿಸ್ತಾನ ಮೂಲದ ಸುಮಾರು 20 ವರ್ಷದ ಮಹಿಳೆಗೆ ಪಬ್ ಜಿ ಆಟದ ಮೂಲಕ ನೊಯ್ಡಾ ಮೂಲದ ವ್ಯಕ್ತಿಯ ಪರಿಚಯವಾಗಿದೆ. ಈ ಪರಿಚಯವು ಗೆಳೆತನಕ್ಕೆ ತಿರುಗಿದ್ದು, ಹೀಗಾಗಿ ಆತನನ್ನು ಭೇಟಿಯಾಗಲೆಂದು ಆಕೆ ಪಾಕಿಸ್ತಾನದಿಂದ ತನ್ನ ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದಾಳೆ. ಸದ್ಯ ಮಹಿಳೆ ಹಾಗೂ ಆಕೆಯ ಗೆಳೆಯನನ್ನು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

ಸ್ಥಳೀಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಹಿಳೆ ನೇಪಾಳದ ಮೂಲಕ ಅಕ್ರಮವಾಗಿ ಭಾರತಕ್ಕೆ ಪ್ರವೇಶ ಮಾಡಿದ್ದಾಳೆ. ನಂತರ ಉತ್ತರಪ್ರದೇಶಕ್ಕೆ ಬಂದು ಅಲ್ಲಿಂದ ಬಸ್ ಮೂಲಕ ನೊಯ್ಡಾಗೆ ಆಗಮಿಸಿದ್ದಾಳೆ. ನಂತರ ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಯ ಬಾಡಿಗೆ ವಸತಿಗೃಹದಲ್ಲಿ ತನ್ನ ಮಕ್ಕಳೊಂದಿಗೆ ನೆಲೆಸಿದ್ದಳು ಎಂದು ಅಧಿಕಾರಿ ಹೇಳಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್