ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲಿಸ್ತೀನ್‌ ಧ್ವಜ ಪ್ರದರ್ಶನ – 8 ಜನರ ವಿರುದ್ಧ ಕೇಸ್‌

Public TV
1 Min Read

ರಾಯಚೂರು: ಈದ್ ಮಿಲಾದ್ (Eid Milad) ಮೆರವಣಿಗೆ ವೇಳೆ ಪ್ಯಾಲಿಸ್ತೀನ್‌ ಧ್ವಜ ಪ್ರದರ್ಶನ ಹಿನ್ನೆಲೆ ರಾಯಚೂರಿನಲ್ಲಿ ಎರಡು ಪ್ರತ್ಯೇಕ ‌ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳನ್ನ ವಶಕ್ಕೆ ಪಡೆದು ನೋಟೀಸ್ ಕೊಟ್ಟಿದ್ದಾರೆ. ರಾಯಚೂರು (Raichur) ನಗರದ ಸದರ್ ಬಜಾರ್ ಮತ್ತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.

ರಾಯಚೂರು ಗ್ರಾಮೀಣ ಠಾಣೆಯಲ್ಲಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದರೆ, ಸದರ್ ಬಜಾರ್ ಠಾಣೆಯಲ್ಲಿ ಓರ್ವನ ವಿರುದ್ಧ ಕೇಸ್ ದಾಖಲಾಗಿದೆ. ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರೊ ಆರೋಪದಡಿ ದೂರು ದಾಖಲಾಗಿವೆ. ಇದನ್ನೂ ಓದಿ: Tamil Nadu | ಹೊಸೂರಲ್ಲಿ ಭಾರೀ ಅಗ್ನಿ ಅವಘಡ – ಹೊತ್ತಿ ಉರಿದ ಟಾಟಾ ಕಂಪನಿ

ನಗರದ ಪರಕೋಟಾ ಪ್ರದೇಶದ ನಿವಾಸಿ ಶೇಕ್ ಮಾಸೂಮ್ ಹಾಗೂ ನಗರದ ಆಶ್ರಯ ಕಾಲೋನಿಯ ನಿವಾಸಿಗಳಾದ ಸೋಫಿ, ಮೇಹರಾಜ್, ರಹೀಸ್ ಹುಸೇನ್, ಸೈಯದ್ ಜಬಾರ್ ಸೇರಿ ಒಟ್ಟು 8 ಜನರ ವಿರುದ್ಧ ಪ್ರಕರಣ ದಾಖಲಾಗಿವೆ. ಇದನ್ನೂ ಓದಿ: ಕಾಶ್ಮೀರವನ್ನ ಪ್ಯಾಲೆಸ್ತೀನ್‌ಗೆ ಹೋಲಿಸಿದ ಪಾಕ್ ಪ್ರಧಾನಿಗೆ ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

ಎರಡು ಪ್ರಕರಣಗಳಲ್ಲಿ ಎಂಟು ಆರೋಪಿಗಳನ್ನ ವಶಕ್ಕೆ ಪಡೆದು, ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ವಿಚಾರಣೆ ಅಗತ್ಯ ಹಿನ್ನೆಲೆ ಆರೋಪಿಗಳಿಗೆ ನೋಟಿಸ್ ನೀಡಿದ್ದಾರೆ‌. ಸದ್ಯ ಎರಡು ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳ ಹಿನ್ನೆಲೆ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ 

Share This Article