3ಡಿಯಲ್ಲಿ ಮೂಡಿ ಬರಲಿದೆ ‘ಅಜಯಂತೆ ರಂದಂ ಮೋಷನಂ’ ಪ್ಯಾನ್ ಇಂಡಿಯಾ ಸಿನಿಮಾ

Public TV
2 Min Read

ಲಯಾಳಂ ಖ್ಯಾತ ನಟ ಟೊವಿನೋ ಥಾಮಸ್, ನಟಿ ಕೃತಿ ಶೆಟ್ಟಿ (Kriti Shetty) ಅಭಿನಯದ ನೂತನ ಪ್ಯಾನ್ ಇಂಡಿಯಾ ಸಿನಿಮಾ ‘ಅಜಯಂತೆ ರಂದಂ ಮೋಷನಂ’ (Ajayante Randam Moshanam) ಇಂದು ಸೆಟ್ಟೇರಿದೆ. ಫ್ಯಾಂಟಸಿ ಅಡ್ವೆಂಚರ್ ಸಿನಿಮಾ ಇದಾಗಿದ್ದು, 3ಡಿಯಲ್ಲಿ ತೆರೆ ಕಾಣಲಿರುವ ಬಿಗ್ ಬಜೆಟ್ ಚಿತ್ರದ ಮುಹೂರ್ತ ಇಂದು ಅದ್ದೂರಿಯಾಗಿ ನೆರವೇರಿದೆ. ಮಲಯಾಳಂ ಖ್ಯಾತ ನಟ ಟೊವಿನೋ ಥಾಮಸ್ (Tovino Thomas) ವೃತ್ತಿ ಜೀವನದ ಬಹು ವಿಶೇಷ ಸಿನಿಮಾ ಇದಾಗಿದೆ.  ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ (Pan India)  ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ.

ಮೂರು ಯುಗಗಳನ್ನು ಸುತ್ತುವ ಕಥೆ ಚಿತ್ರದಲ್ಲಿದ್ದು ಟೊವಿನೋ ಥಾಮಸ್ ಮಣಿಯನ್, ಅಜಯನ್, ಕುಂಜಿಕೇಲು ಎಂಬ ಮೂರು ಪಾತ್ರಗಳಿಗೆ ಜೀವ ತುಂಬುತ್ತಿದ್ದಾರೆ. ಈ ಚಿತ್ರ ಸೌತ್ ಸಿನಿರಂಗದ ಸೆನ್ಸೇಷನಲ್ ನಟಿ ಕೃತಿ ಶೆಟ್ಟಿಗೂ ಸ್ಪೆಷಲ್ ಆಗಿದ್ದು ತೆಲುಗು, ತಮಿಳಿನಲ್ಲಿ ಮಿಂಚಿದ್ದ ಕೃತಿ ಈಗ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿ ನೀಡುತ್ತಿದ್ದಾರೆ. ನಟಿಯರಾದ ಐಶ್ವರ್ಯ ರಾಜೇಶ್, ಸುರಭಿ ಲಕ್ಷಿ ಕೂಡ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ:`ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಿಎಂಗೆ ಆಹ್ವಾನ ನೀಡಿದ ಅಣ್ಣಾವ್ರ ಕುಟುಂಬ

 

‘ಅಜಯಂತೆ ರಂದಂ ಮೋಷನಂ’ ನಿರ್ದೇಶಕ ಜಿತಿನ್ ಲಾಲ್ ನಿರ್ದೇಶಿಸುತ್ತಿದ್ದು ಇದು ಇವರ ಮೊದಲ ಸಿನಿಮಾ. ಸುಜಿತ್ ನಂಬಿಯಾರ್ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದು, ಬಾಸಿಲ್ ಜೋಸೆಫ್, ಕಿಶೋರ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಜಗದೀಶ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರ್ಮಾಣವಾಗುತ್ತಿರುವ 3ಡಿಯಲ್ಲಿ ತೆರೆ ಕಾಣುವ ‘ಅಜಯಂಂತೆ ರಂದಂ ಮೋಷನಂ’ ಚಿತ್ರವನ್ನು ಯುಜಿಎಂ ಪ್ರೊಡಕ್ಷನ್ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಮ್ಯಾಜಿಕ್ ಫ್ರೇಮ್ಸ್ ಸಹ ನಿರ್ಮಾಣ ಮಾಡುತ್ತಿದೆ.

ಚಿತ್ರದ ತಾಂತ್ರಿಕ ಬಳಗ ಅನುಭವಿ ತಂತಜ್ಞರಿಂದ ಕೂಡಿದ್ದು,  ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ದೀಪು ನೈನನ್ ಥಾಮಸ್ ಸಂಗೀತ ನಿರ್ದೇಶನ, ಜೋಮನ್ ಟಿ ಜಾನ್ ಛಾಯಾಗ್ರಹಣ, ಶಮೀರ್ ಮೊಹಮ್ಮದ್ ಸಂಕಲನ ಚಿತ್ರಕ್ಕಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *