ಕರ್ನಾಟಕದಲ್ಲಿ ಚುನಾವಣಾ ಅಕ್ರಮದ ಬಗ್ಗೆ ಆಯೋಗ ಗಮನ ಹರಿಸಲಿ: ಪರಂ ಆಗ್ರಹ

Public TV
3 Min Read

ಬೆಂಗಳೂರು: ಚುನಾವಣಾ ಅಕ್ರಮದ ಬಗ್ಗೆ ರಾಹುಲ್ ಗಾಂಧಿ ಅವರು ಮೊದಲಿನಿಂದಲೂ ಹೇಳ್ತಿದ್ದಾರೆ. ಚುನಾವಣಾ ಆಯೋಗ ಅದನ್ನು ತಿರಸ್ಕರಿಸುತ್ತಿತ್ತು. ಈಗ ಅದರ ಬಗ್ಗೆ ಆಯೋಗ ಗಮನ ಹರಿಸಬೇಕು ಎಂದು ರಾಜ್ಯ ಗೃಹಸಚಿವ ಜಿ.ಪರಮೇಶ್ವರ್ (G Parameshwar) ಆಗ್ರಹಿಸಿದ್ದಾರೆ.

ಕರ್ನಾಟಕದ ಒಂದು ಲೋಕಸಭಾ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂಬ ರಾಹುಲ್ ಗಾಂಧಿ (Rahul Gandhi) ಹೇಳಿಕೆ ವಿಚಾರವಾಗಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಚುನಾವಣೆ ಅಕ್ರಮದ ಬಗ್ಗೆ ಬಹಿರಂಗಪಡಿಸಿದ ನಂತರ ಅದನ್ನು ಗಂಭೀರವಾಗಿ ಪರಿಗಣಿಸಬೇಕು. ನಾವು ಸಹ ವೋಟರ್ ಲಿಸ್ಟ್ನಲ್ಲಿ ಏರುಪೇರಾಗಿದೆ ಅನ್ನೋದನ್ನ ಹೇಳ್ತಾನೆ ಬಂದಿದ್ದೇವೆ. ಚುನಾವಣಾ ಆಯೋಗವು (Election Commission) ಇದನ್ನು ಸೀರಿಯಸ್ ಆಗಿ ಗಮನಹರಿಸಬೇಕು ಎಂದಿದ್ದಾರೆ. ಇದನ್ನೂ ಓದಿ: 3,000 ಕೋಟಿ ಸಾಲ ವಂಚನೆ ಕೇಸ್‌ – ಅನಿಲ್‌ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ ED ದಾಳಿ

ಧರ್ಮಸ್ಥಳ ಕೇಸ್‌ಗೆ ಎಸ್‌ಐಟಿ; ಓರ್ವ ಅಧಿಕಾರಿ ಹೊರಕ್ಕೆ:
ಇನ್ನೂ ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ತಂಡದಿಂದ ಐಪಿಎಸ್ ಅಧಿಕಾರಿ ಸೌಮ್ಯಲತಾ ಹೊರಗುಳಿಯುವ ವಿಚಾರವಾಗಿ ಪ್ರತಿಕ್ರಿಸಿದ ಅವರು, ಅಧಿಕೃತವಾಗಿ ನನಗೆ ಅವರು ಮಾಹಿತಿ ತಿಳಿಸಿಲ್ಲ. ಆದರೆ ಅನ್‌ಅಫಿಷಿಯಲ್ ಆಗಿ ಅವರು ತಂಡದಿಂದ ಹೊರಗುಳಿಯುವ ವಿಚಾರಕ್ಕೆ ಪತ್ರ ಬರೆದಿರುವುದು ಗೊತ್ತಾಗಿದೆ. ವೈಯಕ್ತಿಕ ಕಾರಣ ಇದೆ. ಹಾಗಾಗಿ ತಂಡದಿಂದ ಹೊರಗುಳಿಯುವ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಅವರನ್ನು ತಂಡದಿಂದ ಬದಲಾಯಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ED ಭರ್ಜರಿ ಬೇಟೆ – ಟಿಎಂಸಿ ಮಾಜಿ ಸಂಸದನ ಪುತ್ರನಿಗೆ ಸೇರಿದ 127 ಕೋಟಿ ಮೌಲ್ಯದ ಷೇರು ಜಪ್ತಿ

ಜಾತಿ ಜನಗಣತಿ ಸಮೀಕ್ಷೆಗೆ ಕಡಿಮೆ ದಿನಗಳ ಅವಕಾಶದ ವಿಚಾರವಾಗಿ ಮಾತನಾಡಿದ ಅವರು, ತಾಂತ್ರಿಕವಾಗಿ 16 ದಿನಗಳಲ್ಲಿ ಸಮೀಕ್ಷೆ ಮಾಡಬಹುದು. ಈಗೆಲ್ಲ ತಂತ್ರಜ್ಞಾನ ಇದೆ. ಸಮೀಕ್ಷೆ ಮಾಡಬಹುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಮೀಕ್ಷೆ ವಿಚಾರದಲ್ಲಿ ಏನೂ ಸಂಘರ್ಷ ಇಲ್ಲ. ನಮ್ಮ ರಾಜ್ಯದ ಮಟ್ಟಿಗೆ ನಾವು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಮಾಡ್ತಿದ್ದೇವೆ. ತಂತ್ರಜ್ಞಾನ ಬಳಸಿಕೊಂಡು ಈಗ ಬೇಗನೇ ಸಮೀಕ್ಷೆ ಮಾಡಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಕುರ್ಚಿ ಕದನದ ಮಧ್ಯೆ ಡಿಕೆಶಿ ಟೆಂಪನ್‌ ರನ್‌ – ನಾಗೇಶ್ವರ ದೇವಾಲಯಕ್ಕೆ ದಿಢೀರ್ ಭೇಟಿ

ಆಂಧ್ರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಆಂಧ್ರ ಪ್ರದೇಶದ ಪೊಲೀಸರು ಈ ಬಗ್ಗೆ ತನಿಖೆ ಮಾಡ್ತಾರೆ. ಹತ್ಯೆಯಾದವರು ನಮ್ಮ ರಾಜ್ಯದವರಾಗಿರೋದ್ರಿಂದ ಆಂಧ್ರ ಪೊಲೀಸರು ಇಲ್ಲಿಗೂ ಬಂದು ತನಿಖೆ ಮಾಡ್ತಾರೆ. ನಮ್ಮ ಪೊಲೀಸರು ತನಿಖೆಯ ಫಾಲೋಅಪ್ ಮಾಡ್ತಾರೆ. ಆಂಧ್ರದಲ್ಲಿ ಹತ್ಯೆ ಆಗಿರುವ ಹಿನ್ನೆಲೆ ಆ ರಾಜ್ಯದವರೇ ತನಿಖೆ ಮಾಡ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಇಂದು ಜಾಮೀನು ಭವಿಷ್ಯ; ಕೋರ್ಟ್‌ ತೀರ್ಪಿಗೂ ಮುನ್ನವೇ ರಾಯರ ಮೊರೆ ಹೋದ ಪವಿತ್ರಾಗೌಡ

ಕೊಹ್ಲಿ ಬಗ್ಗೆ ವರದಿಯಲ್ಲಿ ಪ್ರಸ್ತಾಪ ಇಲ್ಲ
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ನ್ಯಾ.ಕುನ್ಹಾ ವರದಿ ಮೇಲೆ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಅವರು ಏನು ಶಿಫಾರಸು ಕೊಟ್ಟಿದ್ದಾರೋ ಅದರಂತೆ ತೀರ್ಮಾನ ಮಾಡಲಾಗುವುದು. ಕ್ರಿಮಿನಲ್ ಪ್ರೊಸೀಜರ್ ಬಗ್ಗೆಯೂ ಶಿಫಾರಸು ಮಾಡಿದ್ದಾರೆ. ಕುನ್ಹಾ ಅವರ ವರದಿಯಲ್ಲಿ ಕೊಹ್ಲಿ ಅವರ ಬಗ್ಗೆ ನಿರ್ದಿಷ್ಟವಾಗಿ ಪ್ರಸ್ತಾಪ ಇಲ್ಲ. ಯಾರ್ಯಾರು ಏನೇನು ಮಾಡಿದ್ದಾರೆ ಅನ್ನೋದು ಇದೆ. ಎಲ್ಲವನ್ನು ನೋಡಿ, ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಸಿಎಂ, ಡಿಸಿಎಂ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಓಬಿಸಿ ಸಲಹಾ ಮಂಡಳಿಯ ಸಭೆ ದೆಹಲಿಯಲ್ಲಿ ನಡೆಯುತ್ತಿದೆ. ಆ ಸಭೆಗೆ ಸಿಎಂ, ಡಿಸಿಎಂ ಹೋಗ್ತಿದ್ದಾರೆ. ನಮಗೆ ಆಹ್ವಾನ ಇಲ್ಲ. ಅವರಿಬ್ಬರು ಹೋಗ್ತಿದ್ದಾರೆ ಎಂದು ಹೇಳಿದ್ದಾರೆ.

Share This Article