ಮಾವೋವಾದಿಗಳ ವಿರುದ್ಧ ಎನ್‌ಕೌಂಟರ್‌; ಪ್ಯಾರಾಮಿಲಿಟರಿ ಯೋಧ ಹುತಾತ್ಮ

Public TV
1 Min Read

ರಾಯ್ಪುರ: ಛತ್ತೀಸ್‌ಗಢದ (Chhattisgarh) ಸುಕ್ಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಸಿಬ್ಬಂದಿ ಮತ್ತು ಮಾವೋವಾದಿಗಳ ನಡುವಿನ ಎನ್‌ಕೌಂಟರ್‌ನಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಬ್ ಇನ್‌ಸ್ಪೆಕ್ಟರ್ ಒಬ್ಬರು ಹುತಾತ್ಮರಾಗಿದ್ದಾರೆ.

ಎನ್‌ಕೌಂಟರ್‌ನಲ್ಲಿ ಕಾನ್‌ಸ್ಟೇಬಲ್‌ ಒಬ್ಬರು ಗಾಯಗೊಂಡಿದ್ದಾರೆ. ಸಿಆರ್‌ಪಿಎಫ್‌ನ 165ನೇ ಬೆಟಾಲಿಯನ್‌ನ ತಂಡವೊಂದು ಮಾವೋವಾದಿ (Maoist) ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಜಗರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಅರ್ಚಕರ ಕಣ್ಣು ಕಿತ್ತು, ಜನನಾಂಗ ಕತ್ತರಿಸಿ ಭೀಕರ ಹತ್ಯೆ; ಬಿಹಾರ ಉದ್ವಿಗ್ನ

ಬೆಳಗ್ಗೆ 7 ಗಂಟೆ ಸುಮಾರಿಗೆ ಬೇದ್ರೆ ಕ್ಯಾಂಪ್‌ನಿಂದ ಉರಸಂಗಲ್ ಗ್ರಾಮದ ಕಡೆಗೆ ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಸಬ್ ಇನ್‌ಸ್ಪೆಕ್ಟರ್ ಸುಧಾಕರ್ ರೆಡ್ಡಿ ಹುತಾತ್ಮರಾಗಿದ್ದಾರೆ. ಕಾನ್‌ಸ್ಟೇಬಲ್ ರಾಮು ಅವರಿಗೆ ಬುಲೆಟ್ ತಗುಲಿ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುಂಡಿನ ಚಕಮಕಿ ನಿಂತ ನಂತರ, ನಾಲ್ವರು ಶಂಕಿತರನ್ನು ಸ್ಥಳದಿಂದ ಸುತ್ತುವರಿಯಲಾಯಿತು. ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಪ್ರದೇಶದಲ್ಲಿ ಶೋಧ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೀರೆಯ ಸೆರಗು ಮೆಟ್ರೋ ಬಾಗಿಲಿಗೆ ಸಿಲುಕಿ ಎಳೆದೊಯ್ದ ರೈಲು – ಮಹಿಳೆ ಸಾವು

ಗಾಯಗೊಂಡಿರುವ ಕಾನ್‌ಸ್ಟೇಬಲ್‌ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ವೈದ್ಯ, ಆರ್ಮಿ ಡಾಕ್ಟರ್‌, ಪ್ರಧಾನ ಮಂತ್ರಿ ಕಚೇರಿ ಅಧಿಕಾರಿ.. ನಾನಾ ವೇಶ – ಮಹಿಳೆಯರನ್ನು ವಂಚಿಸುತ್ತಿದ್ದ ವ್ಯಕ್ತಿ ಬಂಧನ

Share This Article