ಹೆತ್ತವರು ಜಮೀನು ಕೊಟ್ಟಿಲ್ಲವೆಂದು ದ್ವೇಷ – ಹಿಪ್ಪು ನೇರಳೆ ಗಿಡಕ್ಕೆ ವಿಷ ಹಾಕಿ ನಾಶ ಮಾಡಿದ ಮಗಳು!

Public TV
1 Min Read

ಕೋಲಾರ: ಹೆತ್ತವರು ಜಮೀನು ಕೊಟ್ಟಿಲ್ಲವೆಂದು ಸಿಟ್ಟಿನಿಂದ ಮಗಳು ಗಿಡಗಳಿಗೆ ವಿಷ ಹಾಕಿ ನಾಶಪಡಿಸಿದ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ತಾಲೂಕಿನ ಯಳಚೀಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ರಾಮಣ್ಣ ಹಾಗೂ ಲಕ್ಷ್ಮಮ್ಮ ಎಂಬ ವೃದ್ಧ ದಂಪತಿ ಬೆಳೆ ಕಳೆದುಕೊಂಡು ಇದೀಗ ಕಣ್ಣೀರಾಕುತ್ತಿದ್ದಾರೆ. ಹಿರಿ ಮಗಳು ಚೌಡಮ್ಮಳಿಗೆ ಜಮೀನು ನೀಡದ್ದಕ್ಕೆ ಈ ಕೃತ್ಯ ಎಸಗಿದ್ದಾಳೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಗದರಿಸಿದ ಮಾತ್ರಕ್ಕೆ ತಂದೆಯನ್ನು ಮಗ ಕೊಲೆ ಮಾಡುವಂತಿಲ್ಲ: ಹೈಕೋರ್ಟ್

ಪೋಷಕರು ಜಮೀನು ಕೊಟ್ಟಿಲ್ಲ ಎಂದು ಚೌಡಮ್ಮ ಹಿಪ್ಪುನೇರಳೆ ಬೆಳೆಗೆ ವಿಷ ಸಿಂಪಡಣೆ ಮಾಡಿದ್ದಾಳೆ. ಹೀಗಾಗಿ ವಿಷ ಸಿಂಪಡಣೆ ಮಾಡಿದ ಹಿಪ್ಪು ನೇರಳೆ ಸೊಪ್ಪು ತಿಂದ ಹುಳುಗಳು ಸಾಯುತ್ತಿವೆ. ಪರಿಣಾಮ 150 ಮೊಟ್ಟೆಯ ಸುಮಾರು ಒಂದು ಲಕ್ಷ ಮೌಲ್ಯದ ರೇಷ್ಮೆ ಬೆಳೆ ನಾಶವಾಗಿದೆ ಎಂದು ವೃದ್ಧ ದಂಪತಿ ಕಣ್ಣೀರಿಡುತ್ತಿದ್ದಾರೆ.

ಸಾಲ ಮಾಡಿ ತಮ್ಮ ಜೀವನಕ್ಕೆ ಕಷ್ಟಪಟ್ಟು ರೇಷ್ಮೆ ಬೆಳೆಯನ್ನು ಬೆಳೆದ್ರೆ ವಿಷ ಹಾಕಿದ್ದಾರೆಂದು ಬೇಸರ ವ್ಯಕ್ತಪಡಿಸಿದ್ದಾರೆ. ವೃದ್ಧ ದಂಪತಿಯ ಮಗಳಾದ ಚೌಡಮ್ಮ, ಅಳಿಯ ಲಕ್ಷ್ಮಣ್, ಮೊಮ್ಮಗ ಆನಂದ ಅವರೇ ವಿಷ ಹಾಕಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಇದನ್ನೂ ಓದಿ:  ಕೈ ನಾಯಕರಿಗೊಂದು ಉದ್ಯೋಗ ಬೇಕಿದೆ, ಅದಕ್ಕೆ ಇಲ್ಲಸಲ್ಲದ ಮಾತುಗಳನ್ನಾಡ್ತಿದ್ದಾರೆ: ಮುನಿರತ್ನ

ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *