ಎಂಗೇಜ್ ಆಗಿ ಲಿಪ್ ಲಾಕ್ ಮಾಡಿಕೊಂಡ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ

Public TV
2 Min Read

ಬಾಲಿವುಡ್ ನ ಮತ್ತೋರ್ವ ತಾರೆಯ ನಿಶ್ಚಿತಾರ್ಥವಾಗಿದೆ. ಮೂರು ದಿನಗಳ ಹಿಂದೆಯಷ್ಟೇ ನಟಿ ಪರಿಣಿತಿ ಚೋಪ್ರಾ ಹಾಗೂ ಸಂಸದ ರಾಘವ್ ಚಡ್ಡಾ ಎಂಗೇಜ್ ಮೆಂಟ್ ಮಾಡಿಕೊಳ್ಳುವ ಮೂಲಕ ಹೊಸ ಜೀವನಕ್ಕೆ ಕಾಲಿಡಲು ಮುಂದಾಗಿದ್ದಾರೆ. ಎಂಗೇಜ್ ಮೆಂಟ್ ದಿನ ಪರಿಣಿತಿ ಹಾಗೂ ರಾಘವ್ ಲಿಪ್ ಲಾಕ್ (Lip Lock) ಮಾಡಿಕೊಂಡ ವಿಡಿಯೋ ಸಖತ್ ವೈರಲ್ ಆಗಿದೆ. ಇಬ್ಬರೂ ಹಲವು ದಿನಗಳಿಂದ ಡೇಟಿಂಗ್ ನಡೆಸುತ್ತಿದ್ದರು ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಹಲವರು ವಿಡಿಯೋಗೆ ಕಾಮೆಂಟ್ ಮಾಡಿದ್ದಾರೆ.

ಪರಿಣಿತಿ ಚೋಪ್ರಾ (Parineeti Chopra) ಹಾಗೂ ಸಂಸದ ರಾಘವ್ ಚಡ್ಡಾ (Raghav Chadha) ಎಂಗೇಜ್ ಮೆಂಟ್ (Engagement) ಮಾಡಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಬಿಟೌನ್ ನಲ್ಲಿ ಹರಿದಾಡುತ್ತಿತ್ತು. ಇಬ್ಬರೂ ಒಟ್ಟೊಟ್ಟಿಗೆ ಓಡಾಡುತ್ತಿರುವ ವಿಷಯ ಈ ಸುದ್ದಿಗೆ ಪುಷ್ಠಿ ಕೊಟ್ಟಿತ್ತು. ಆದರೆ, ಅವರು ಈ ವಿಷಯವನ್ನು ನಿರಾಕರಿಸುತ್ತಲೇ ಬಂದಿದ್ದರು. ಇದೀಗ ಎಂಗೇಜ್ ಮೆಂಟ್ ಮಾಡಿಕೊಳ್ಳುವ ಮೂಲಕ ಗಾಸಿಪ್ ಗೆ ತೆರೆ ಎಳೆದಿದ್ದಾರೆ.

ಈ ಜೋಡಿಯ ನಿಶ್ಚಿತಾರ್ಥ ಸಮಾರಂಭಂದಲ್ಲಿ ರಾಜಕೀಯ ಗಣ್ಯರು, ಸಿನಿ ತಾರೆಯರು ಹಾಗೂ ಕ್ರೀಡಾಪಟುಗಳ ಭಾಗಿಯಾಗಿದ್ದರು. ಪರಿಣಿತಿ ಸಹೋದರಿ ಪ್ರಿಯಾಂಕಾ ಚೋಪ್ರಾ, ಮನೀಶ್ ಮಲ್ಹೋತ್ರಾ ಸೇರಿದಂತೆ ಹಲವರು ಇಡೀ ಸಮಾರಂಭದಲ್ಲಿ ಮಿಂಚಿದ್ದಾರೆ. ದೆಹಲಿಯ (Delhi) ಇಂಡಿಯಾ ಗೇಟ್ ಬಳಿಯ ಕಪುರ್ತಲ ಹೌಸ್ ನಲ್ಲಿ ಪರಿಣಿತಿ ಚೋಪ್ರಾ ಹಾಗೂ ರಾಘವ್ ಉಂಗುರ ಬದಲಾಯಿಸಿಕೊಂಡಿದ್ದಾರೆ. ಇದನ್ನೂ ಓದಿ:ಮುರಿದು ಬಿತ್ತಾ ತೆಲುಗು ನಟ ಶರ್ವಾನಂದ್ ನಿಶ್ಚಿತಾರ್ಥ?

ಸಂಪೂರ್ಣ ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಎರಡೂ ಕುಟುಂಬದಿಂದ 150 ಜನರಷ್ಟೇ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪರಿಣಿತಿ, ಮನೀಷ್ ಮಲ್ಹೋತ್ರಾ ಬಳಿ ಸರಳವಾಗಿ ಡ್ರೆಸ್ ಮಾಡಿಸಿದ್ದರು. ರಾಘವ್, ಅವರ ಚಿಕ್ಕಪ್ಪ ಪವನ್ ಸಚ್‌ದೇವ್ ಬಳಿ ನಿಶ್ಚಿತಾರ್ಥಕ್ಕೆ ಔಟ್ ಫಿಟ್ ಡಿಸೈನ್ ಮಾಡಿಸಲಾಗಿತ್ತು.‌

ನಟಿ ಪರಿಣಿತಿ(Parineeti Chopra), ರಾಜಕಾರಣಿ ರಾಘವ್ ಎಂಗೇಜ್‌ಮೆಂಟ್ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ ದಂಪತಿ, ಆಲಿಯಾ ಭಟ್, ಕತ್ರಿನಾ ಕೈಫ್, ನಟ ಅಕ್ಷಯ್‌ ಕುಮಾರ್ ಸೇರಿದಂತೆ ಹಲವು ಸಿನಿಮಾ ಸ್ಟಾರ್‌ಗಳು, ರಾಜಕೀಯ ಗಣ್ಯರು ಭಾಗಿಯಾಗಿದ್ದರು.

ಹರಿಯಾಣದಲ್ಲಿ ನಡೆದ ಶೂಟಿಂಗ್ ವೇಳೆ ಇಬ್ಬರೂ ಪರಿಚಯವಾಗಿ ಆನಂತರ ಡೇಟಿಂಗ್ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಪೋಷಕರ ಒಪ್ಪಿಗೆ ಪಡೆದುಕೊಂಡೇ ಇಬ್ಬರೂ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ರಾಘವ್ ಚಡ್ಡಾ ಆಪ್ ಪಕ್ಷದಿಂದ ಎಂಪಿ ಆಗಿದ್ದರೆ, ಪರಿಣಿತಿ ಲೇಡಿಸ್ ವರ್ಸಸ್ ರಿಕ್ಕಿ ಬೇಲ್ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟು ಈಗಲೂ ಸಿನಿಮಾ ರಂಗದಲ್ಲೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

Share This Article