ಕಾರ್ ಪಾರ್ಕಿಂಗ್ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಬರ್ಬರ ಹತ್ಯೆ

Public TV
1 Min Read

ಬೆಂಗಳೂರು: ಅಂಗಡಿಯ ಮುಂದೆ ಕಾರ್ ಪಾಕಿರ್ಂಗ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ (Parking dispute) ಯುವಕನೊಬ್ಬನ ಕೊಲೆಯಲ್ಲಿ (Murder) ಅಂತ್ಯವಾಗಿರುವುದು ನಗರದ ಹೊರವಲಯದ ಸೊಂಡೆಕುಪ್ಪ ಗ್ರಾಮ ಪಂಚಾಯಿತಿ ಬಳಿ ನಡೆದಿದೆ.

ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ರೆಹಮಾನ್ (17) ಕೊಲೆಯಾದ ಯುವಕ. ಅದೇ ಗ್ರಾಮದ ರೇಣುಕಾ ಹಾಗೂ ಪರ್ಮಿ ಎಂಬವರು ರೆಹಮಾನ್ ಎದೆಗೆ ಚಾಕು ಇರಿದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗದೆ. ಕೊಲೆಯಾದ ಯುವಕ ಹುಟ್ಟು ಹಬ್ಬಕ್ಕೆಂದು ಮಂಗಳವಾರ ಕೇಕ್ ತರಲು ಬೇಕರಿ ಬಳಿ ಹೋಗಿದ್ದ. ಈ ವೇಳೆ ಆರೋಪಿಗಳು ಅಂಗಡಿ ಮುಂದೆ ಕಾರು ಪಾರ್ಕಿಂಗ್ ಮಾಡಿದ್ದು, ಇದನ್ನು ರೆಹಮಾನ್ ಪ್ರಶ್ನೆ ಮಾಡಿದ್ದ ಇದೇ ವಿಚಾರಕ್ಕೆ ಕಾರಿನಲ್ಲಿದ್ದವರು ಯುವಕನ ಮೇಲೆ ಗಲಾಟೆ ಮಾಡಿದ್ದರು.

ಇದೇ ಕಾರಣಕ್ಕೆ ಬುಧವಾರ ರಾತ್ರಿ ಎರಡು ಗುಂಪುಗಳ ನಡುವೆ ಮತ್ತೆ ಗಲಾಟೆ ನಡೆದಿದೆ. ಈ ವೇಳೆ ಆರೋಪಿಗಳಾದ ರೇಣುಕಾ ಹಾಗೂ ಪರ್ಮಿ ಎಂಬವರು ಕಾರಿನಲ್ಲಿದ್ದ ಚಾಕು ಹಾಗೂ ಪಿಸ್ತೂಲ್ ತೋರಿಸಿ ಬೆದರಿಸಿದ್ದಾರೆ. ಬಳಿಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿ ರೇಣುಕಾನನ್ನು ಮಾದನಾಯಕನಹಳ್ಳಿ ಪೊಲೀಸರು (Police) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Share This Article