ವಂದೇ ಭಾರತ್‌ ಎಕ್ಸ್‌ಪ್ರೆಸ್‌ನಲ್ಲಿ ನೀಡಿದ ಚಪಾತಿ ಊಟದಲ್ಲಿ ಜಿರಳೆ ಪತ್ತೆ – ಪ್ರಯಾಣಿಕ ಶಾಕ್‌!

By
1 Min Read

ಭೋಪಾಲ್:‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ (Vande Bharat Express) ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ನೀಡಲಾದ ಚಪಾತಿ ಊಟದಲ್ಲಿ ಜಿರಳೆ (Cockroach) ಕಂಡು ದಿಗ್ಭ್ರಮೆಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ರಾಜಧಾನಿ ಭೋಪಾಲ್‌ನಿಂದ ಗ್ವಾಲಿಯರ್‌ಗೆ ಪ್ರಯಾಣಿಸುತ್ತಿದ್ದ ವೇಳೆ IRCTC ಕ್ಯಾಟರಿಂಗ್‌ ಸಿಬ್ಬಂದಿ ಬಡಿಸಿದ ಚಪಾತಿ ಊಟದಲ್ಲಿ ಜಿರಳೆ ಪತ್ತೆಯಾಗಿದೆ. ಬ್ಲಾಗರ್‌ ಸುಬೋಧ್ ಪಹಲಾಜನ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಈ ಕುರಿತ ಫೋಟೋಗಳನ್ನ ಹಂಚಿಕೊಂಡಿದ್ದು ಭಾರೀ ಸದ್ದು ಮಾಡ್ತಿದೆ. ಇದನ್ನೂ ಓದಿ: ಇಡಿ ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾ ಅಧಿಕಾರಾವಧಿ ವಿಸ್ತರಣೆಗೆ ಸುಪ್ರೀಂ ಸಮ್ಮತಿ

ಟ್ವೀಟ್‌ ಮೂಲಕ ಹಂಚಿಕೊಳ್ಳಲಾದ ಫೋಟೋಗಳಲ್ಲಿ ಚಪಾತಿಗೆ ಸಣ್ಣ ಜಿರಳೆಯೊಂದು ಅಂಟಿಕೊಂಡಿರುವುದನ್ನ ತೋರಿಸಿದೆ. ಇದನ್ನ ಐಆರ್‌ಸಿಟಿಸಿ ಅಧಿಕೃತ ಖಾತೆಗೆ ಟ್ಯಾಗ್‌ ಮಾಡಿದ್ದು, ವಂದೇ ಭಾರತ್‌ ರೈಲಿನಲ್ಲಿ ನನಗೆ ನೀಡಲಾದ ಆಹಾರದಲ್ಲಿ ಜಿರಳೆ ಕಂಡುಬಂದಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆ – ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಐಆರ್‌ಸಿಟಿಸಿ, ಪ್ರಯಾಣಿಕನ ಸಮಸ್ಯೆಯನ್ನ ಬಗೆಹರಿಸಿದೆ. ಅಲ್ಲದೇ ನಿಮಗೆ ಸಂಭವಿಸಿದ ಅಹಿತಕರ ಘಟನೆಗಾಗಿ ವಿಷಾದಿಸುತ್ತೇವೆ. ಮುಂದೆ ಅಂತಹ ಯಾವುದೇ ಘಟನೆಗಳು ನಡೆಯದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪ್ರತಿಕ್ರಿಯಿಸಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್