ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ರಿಲೀಸ್ ಡೇಟ್ ಅನೌನ್ಸ್

Public TV
1 Min Read

ವನ್ ಕಲ್ಯಾಣ್ (Pawan Kalyan) ಅವರು ಕೊನೆಗೂ ಒಪ್ಪಿಕೊಂಡ ಸಿನಿಮಾವನ್ನು ಪೂರ್ಣಗೊಳಿಸಿದ್ದಾರೆ. ‘ಹರಿ ಹರ ವೀರ ಮಲ್ಲು’ ಸಿನಿಮಾದ ಹೊಸ ಬಿಡುಗಡೆ ದಿನಾಂಕವನ್ನು ಚಿತ್ರತಂಡ ತಿಳಿಸಿದೆ. ಇದನ್ನೂ ಓದಿ:Ramayana: ‘ರಾವಣ’ ಯಶ್ ಪತ್ನಿಯಾಗಿ ಕಾಜಲ್ ಅಗರ್ವಾಲ್?

ರಾಜಕೀಯದಲ್ಲಿ ಪವನ್ ಕಲ್ಯಾಣ್ ಬ್ಯುಸಿಯಿದ್ದ ಹಿನ್ನೆಲೆ ಈ ಚಿತ್ರ ಅರ್ಧಕ್ಕೆ ನಿಂತಿತ್ತು. ಕೊನೆಗೂ ಬಿಡುವು ಮಾಡಿಕೊಂಡು ‘ಹರಿ ಹರ ವೀರ ಮಲ್ಲು’ ಚಿತ್ರವನ್ನು ನಟ ಮುಗಿಸಿಕೊಟ್ಟಿದ್ದಾರೆ. ಮೇ 9ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ಜೂನ್ 12ರಂದು ರಿಲೀಸ್ ಆಗಲಿದೆ. ಇದನ್ನು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ. ಇದನ್ನೂ ಓದಿ:10 ಲಕ್ಷದ ಡೈಮಂಡ್ ರಿಂಗ್, 9 ಲಕ್ಷ ಮೌಲ್ಯದ ವಾಚ್- ‘ಭಜರಂಗಿ’ ನಟಿ ಬ್ಯಾಗ್ ಕದ್ದ ಆರೋಪಿ ಅರೆಸ್ಟ್

ಈ ಹಿಂದೆ ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿತ್ತು. ಇದಕ್ಕೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಬಿಡುಗಡೆ ಘೋಷಣೆ ಮಾಡಿ ಗುಡ್ ನ್ಯೂಸ್ ಕೊಟ್ಟಿರೋದು ನಟನ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಈ ಸಿನಿಮಾದಲ್ಲಿ ಪವನ್ ಜೊತೆ ನಿಧಿ ಅಗರ್ವಾಲ್, ಬಾಬಿ ಡಿಯೋಲ್ ಸೇರಿದಂತೆ ಅನೇಕರು ನಟಿಸಿದ್ದಾರೆ.

ಈ ಚಿತ್ರದ ಜೊತೆ ಓಜಿ, ಶ್ರೀಲೀಲಾ ಜೊತೆಗಿನ ಉಸ್ತಾದ್ ಭಗತ್ ಸಿಂಗ್ ಚಿತ್ರಗಳು ಪವನ್ ಕಲ್ಯಾಣ್ ಕೈಯಲ್ಲಿದೆ. ಇದರ ಬಗ್ಗೆ ಅದ್ಯಾವಾಗ ಅಪ್‌ಡೇಟ್ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.

Share This Article