ನವದೆಹಲಿ: ಅಸ್ಸಾಂ ಪೊಲೀಸರು (Assam Police) ದಾಖಲಿಸಿರುವ ಮಾನನಷ್ಟ ಮತ್ತು ಫೋರ್ಜರಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ (Supreme Court) ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ ನಿರೀಕ್ಷಣಾ ಜಾಮೀನು (Anticipatory Bail) ಮಂಜೂರು ಮಾಡಿದೆ.
ಏಪ್ರಿಲ್ 24ರಂದು ಗುವಾಹಟಿ ಹೈಕೋರ್ಟ್ (Guwahati High Court) ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ಬದಲಿಸುವ ಮೂಲಕ ಅವರಿಗೆ ಬಂಧನದಿಂದ ರಕ್ಷಣೆ ನೀಡಿದೆ.
ಈ ಪ್ರಕರಣವು ರಾಜಕೀಯ ದ್ವೇಷದಿಂದ ಕೂಡಿದೆ. ಆರೋಪಿಯು ತನಿಖೆಗೆ ಸಹಕರಿಸುತ್ತಿರುವಾಗ ಬಂಧನದ ಅಗತ್ಯವಿಲ್ಲ ಎಂದು ನ್ಯಾ.ಜೆ.ಕೆ. ಮಹೇಶ್ವರಿ ಹಾಗೂ ನ್ಯಾ.ಅತುಲ್ ಚಂದೂರ್ಕರ್ ಅವರ ಪೀಠ ಹೇಳಿದೆ. ಇದನ್ನೂ ಓದಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಪೈಪೋಟಿಯಿಂದ ಪ್ರೇರಿತವಾದ ಪ್ರಕರಣಗಳಲ್ಲಿ ವೈಯಕ್ತಿಕ ಸ್ವಾತಂತ್ರ್ಯವನ್ನು ಹಗುರವಾಗಿ ಪರಿಗಣಿಸಲು ಅಥವಾ ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರ ಪತ್ನಿ ರಿಂಕಿ ಭುಯಾನ್ ಶರ್ಮಾ ಅವರು ಪವನ್ ಖೇರಾ ವಿರುದ್ಧ ಮಾನನಷ್ಟ ಮತ್ತು ದಾಖಲೆಗಳ ದುರುಪಯೋಗದ (ಫೋರ್ಜರಿ) ಆರೋಪ ಹೊರಿಸಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ
ಖೇರಾ ಅವರು ಸಾರ್ವಜನಿಕವಾಗಿ ನೀಡಿದ ಹೇಳಿಕೆಗಳು ಮತ್ತು ಸಲ್ಲಿಕೆಯಾದ ದಾಖಲೆಗಳು ನಕಲಿ ಎಂಬ ಆರೋಪದ ಮೇಲೆ ಅಸ್ಸಾಂ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

