ಶಾಂತಿಯುತ ಸಹಕಾರ ಸಂಬಂಧಗಳನ್ನು ಬೆಳೆಸೋಣ: ಮೋದಿಗೆ ಷರೀಫ್ ಪತ್ರ

By
1 Min Read

ಇಸ್ಲಾಮಾಬಾದ್: ಹೊಸದಾಗಿ ಚುನಾಯಿತರಾಗಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಭಾರತದೊಂದಿಗಿನ ಸಂಬಂಧವನ್ನು ಸುಧಾರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಈ ಬಗ್ಗೆ ಷರೀಫ್ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಶಾಂತಿಯುತ ಹಾಗೂ ಸಹಕಾರಿ ಸಂಬಂಧವನ್ನು ಬೆಳೆಸುವಂತೆ ಕೋರಿದ್ದಾರೆ.

ಶೆಹಬಾಜ್ ಷರೀಫ್ ಕೆಲವು ದಿನಗಳ ಹಿಂದೆ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಭಾರತ ಹಾಗೂ ಪಾಕಿಸ್ತಾನದ ನಡುವಿನ ಶಾಂತಿಯುತ ಬಾಂಧವ್ಯ ಹಾಗೂ ಜಮ್ಮು-ಕಾಶ್ಮೀರದ ಸಂಘರ್ಷ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ಕೋರಿದ್ದಾರೆ ಎಂದು ಭಾನುವಾರ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸ್ವೀಡನ್‌ನಲ್ಲಿ ಕುರಾನ್ ದಹನದ ಬೆದರಿಕೆ – ವಾಹನಗಳಿಗೆ ಬೆಂಕಿ, ಪೊಲೀಸ್ ವಾಹನಗಳು ಧ್ವಂಸ

ಶೆಹಬಾಜ್ ಷರೀಫ್ ಪಾಕಿಸ್ತಾನದ ಪ್ರಧಾನಿ ಸ್ಥಾನವನ್ನು ಅಲಂಕರಿಸಿದ ಬಳಿಕ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಷರೀಫ್ ಪತ್ರವನ್ನು ಕಳುಹಿಸಿದ್ದಾರೆ. ಪಾಕಿಸ್ತಾನದ ರಾಜಕೀಯ ಪಕ್ಷ ಪಿಎಂಎಲ್ ಜಮ್ಮು-ಕಾಶ್ಮೀರ ಹಾಗೂ ಬಾಕಿ ಉಳಿದಿರುವ ಎಲ್ಲಾ ಸಮಸ್ಯೆಗಳನ್ನೂ ಶಾಂತಿಯುತವಾಗಿ ಪರಿಹರಿಸಿಕೊಳ್ಳುವ ಮೂಲಕ ಭಾರತದೊಂದಿಗೆ ಉತ್ತಮ ಬಾಂಧವ್ಯವನ್ನು ಸಾಧಿಸಬಹುದು ಎಂದು ಹೇಳಿತ್ತು. ಇದನ್ನೂ ಓದಿ: ಭೀಕರ ಪ್ರವಾಹಕ್ಕೆ ದಕ್ಷಿಣ ಆಫ್ರಿಕಾ ತತ್ತರ – 443ಕ್ಕೆ ಏರಿದ ಸಾವಿನ ಸಂಖ್ಯೆ

ಏಪ್ರಿಲ್ 11 ರಂದು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಷರೀಫ್ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ಮೋದಿ ಟ್ವೀಟ್ ಮೂಲಕ ಅವರನ್ನು ಅಭಿನಂದಿಸಿದ್ದರು ಹಾಗೂ ಉಭಯ ರಾಷ್ಟ್ರಗಳು ಒಟ್ಟಾಗಿ ಜನರ ಯೋಗಕ್ಷೇಮ ಹಾಗೂ ಸಮೃದ್ಧಿಗಾಗಿ ಕೆಲಸ ಮಾಡಲು ಬಯಸುತ್ತೇವೆ ಎಂದಿದ್ದರು.

Share This Article
Leave a Comment

Leave a Reply

Your email address will not be published. Required fields are marked *