ಪೆಮಾ ಖಂಡು ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶ ಸಿಎಂ

Public TV
1 Min Read

ಇಟಾನಗರ: ಪೆಮಾ ಖಂಡು (Pema Khandu) ಅವರು ಸತತ ಮೂರನೇ ಅವಧಿಗೆ ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿಯಾಗಲಿದ್ದಾರೆ. ಬುಧವಾರ ನಡೆದ ಸಭೆಯಲ್ಲಿ ಖಂಡು ಅವರನ್ನು ಬಿಜೆಪಿ (BJP) ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಅರುಣಾಚಲ ಪ್ರದೇಶದ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ಬಿಜೆಪಿಯ ಹಿರಿಯ ನಾಯಕರಾದ ರವಿಶಂಕರ್ ಪ್ರಸಾದ್ ಮತ್ತು ತರುಣ್ ಚುಗ್ ಅವರನ್ನು ವೀಕ್ಷಕರನ್ನಾಗಿ ಕಳುಹಿಸಲಾಗಿತ್ತು. ಖಂಡು ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಗುರುವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್‌ ಕಲ್ಯಾಣ್‌ ಪ್ರಮಾಣವಚನ ಸ್ವೀಕಾರ

ಅರುಣಾಚಲ ಪ್ರದೇಶದಲ್ಲಿ ಪೆಮಾ ಖಂಡು ನೇತೃತ್ವದ ಬಿಜೆಪಿ 60 ಸದಸ್ಯ ಬಲದ ವಿಧಾನಸಭೆಯಲ್ಲಿ 46 ಸ್ಥಾನಗಳಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿತ್ತು. ರಾಜ್ಯದಲ್ಲಿ ಈಚೆಗೆ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ 5, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ 3, ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ 2, ಕಾಂಗ್ರೆಸ್ 1 ಮತ್ತು ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿಗೆ ಎನ್‌ಪಿಪಿ ಬೆಂಬಲವನ್ನು ನೀಡಿದೆ. ಆದರೆ ಹೊಸ ಕ್ಯಾಬಿನೆಟ್‌ನಲ್ಲಿ ಪಕ್ಷಕ್ಕೆ ಪ್ರಾತಿನಿಧ್ಯ ಸಿಗುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜೂನ್‌ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ

Share This Article