ಕಾರು ಅಪಘಾತ- ಸಹಾಯಕ್ಕಾಗಿ ಬಂದು ಎಣ್ಣೆ ಬಾಟ್ಲಿಯೊಂದಿಗೆ ಯುವಕರು ಎಸ್ಕೇಪ್

By
1 Min Read

ಪಾಟ್ನಾ: ಬಿಹಾರದಲ್ಲಿ (Bihar) 2016 ರಿಂದ ಮದ್ಯ ಮಾರಾಟ ನಿಷೇಧವಾಗಿದೆ. ಹೀಗಾಗಿ ರಾಜ್ಯದ ಜನ ಆಲ್ಕೋಹಾಲ್ (Alcohol) ಎಲ್ಲಿ ಸಿಗುತ್ತದೆ ಅಂತಾ ಕಾಯುತ್ತಿದ್ದಾರೆ. ಅಂತೆಯೇ ಇದೀಗ ಅಪಘಾತಕ್ಕೀಡಾದ ಕಾರಿನಲ್ಲಿದ್ದ ಮದ್ಯದ ಬಾಟ್ಲಿಗಳನ್ನು ಯುವಕರನ್ನು ಕಸಿದುಕೊಂಡು ಓಡಿಹೋಗಿದ್ದಾರೆ.

ಯುವಕರು ಬಾಟ್ಲಿ ಹಿಡಿದುಕೊಂಡು ಓಡುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ವಿದೇಶಿ ಮದ್ಯ ತುಂಬಿದ್ದ ಕಾರು ಮತ್ತು ಇನ್ನೊಂದು ವಾಹನದ ನಡುವೆ ಡಿಕ್ಕಿ ಸಂಭವಿಸಿದೆ. ಕೂಡಲೇ ಸ್ಥಳೀಯ ನಿವಾಸಿಗಳು ಸಹಾಯ ಮಾಡುದ ಉದ್ದೇಶದಿಂದ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಕಾರೊಳಗೆ ಆಲ್ಕೋಹಾಲ್ ಬಾಟ್ಲಿಗಳಿರುವುದನ್ನು ಅವರು ಗಮನಿಸಿದ್ದು, ಕೈಗೆ ಸಿಕ್ಕಿ ಬಾಟ್ಲಿಗಳೊಂದಿಗೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಇಬ್ಬರು ಬಾಟ್ಲಿಗಳನ್ನು ಹಿಡಿದುಕೊಂಡು ಹೋಗುತ್ತಿರುವುದನ್ನು ಗಮನಿಸಿದ ಉಳಿದ ಮಂದಿಯೂ ಕೈಗೆ ಸಿಕ್ಕ ಬಾಟ್ಲಿಗಳನ್ನು ಹಿಡಿದುಕೊಂಡು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಈ ಎಲ್ಲಾ ದೃಶ್ಯಗಳನ್ನು ಸ್ಥಳದಲ್ಲಿದ್ದವರೊಬ್ಬರು ವೀಡಿಯೋ ಮಾಡಿದ್ದು, ಈ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಹಿಂದೂ ಸಂಪ್ರದಾಯದಂತೆ ಉಪವಾಸ ಆಚರಿಸಿದ ಪಾಕ್‌ ಮಹಿಳೆ ಸೀಮಾ – ಕಾರಣ ಗೊತ್ತಾ.?

ಇತ್ತ ಅಪಘಾತದ ಮಾಹಿತಿ ಅರಿತ ದೋಭಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ಪೊಲೀಸರು ಬಂದಿದ್ದನ್ನು ಲೆಕ್ಕಿಸದೇ ಜನ ಮದ್ಯದ ಬಾಟ್ಲಿಗಳಿಗಾಗಿ ಜನ ಮುಗಿಬಿದ್ದಿದ್ದಾರೆ. ಈ ಸಂಬಂಧ ಅಬಕಾರಿ ಇಲಾಖೆಯ ಸಹಾಯಕ ಕಮಿಷನರ್ ಪ್ರೇಮ್ ಪ್ರಕಾಶ್ ಮಾತನಾಡಿ, ವೀಡಿಯೋದಲ್ಲಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರನ್ನು ಗುರುತಿಸಲಾಗುತ್ತಿದೆ ಎಂದಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್