ಅಮೂಲ್‌ಗೆ ಮಣೆಹಾಕಿದ್ದ BMRCLಗೆ ಮುಖಭಂಗ- ಮೆಟ್ರೋ ನಿಲ್ದಾಣಗಳಲ್ಲಿ 20 ನಂದಿನಿ ಮಳಿಗೆ ತೆರೆಯಲು ಅವಕಾಶ

Public TV
2 Min Read

ಬೆಂಗಳೂರು: ಕರ್ನಾಟಕದ ಬ್ರ್ಯಾಂಡ್‌ ನಂದಿನಿಯನ್ನು ಕಡೆಗಣಿಸಿ, ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ (Amul) ಮಳಿಗೆಗಳನ್ನು ತೆರೆಯಲು ನಮ್ಮ ಮೆಟ್ರೋ (Namma Metro) ಮುಂದಾಗಿತ್ತು. ಈ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮೆಟ್ರೋ ನಿಲ್ದಾಣದಲ್ಲಿ 20 ನಂದಿನಿ ಮಳಿಗೆಗಳನ್ನು ರಿಯಾಯಿತಿ ದರದಲ್ಲಿ ತೆರೆಯಲು BMRCL ಒಪ್ಪಿದೆ.

BMRCL ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಹೊರ ರಾಜ್ಯದ ಅಮೂಲ್ ಸಂಸ್ಥೆಯ ಕಿಯೋಸ್ಕ್ಗಳನ್ನು ತೆರೆಯಲು ಅವಕಾಶ ಕೊಟ್ಟಿತ್ತು. ಈ ಬಗ್ಗೆ ಗುಜರಾತ್ ಮಿಲ್ಕ್ ಫೆಡರೇಶನ್ ಜೊತೆ ಒಪ್ಪಂದಕ್ಕೆ ಸಹಿ ಕೂಡ ಹಾಕಿತ್ತು. ರಾಜ್ಯದ ರೈತರ ಹೆಮ್ಮೆಯ ಕೆಎಂಎಫ್ ನಂದಿನಿಗೆ ಮಣೆ ಹಾಕಿರಲಿಲ್ಲ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಸಾವು ಗೆದ್ದು ಬಂದಿದ್ದ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಈ BMRCLನ ನಿರ್ಧಾರದ ಬಗ್ಗೆ ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ಮಧ್ಯೆ ಪ್ರವೇಶಿಸಿದ ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಅವರು, BMRCL ಗ್ಲೋಬಲ್ ಟೆಂಡರ್ ಕರೆದಿದ್ದರು. ಅದಕ್ಕೆ ಅಮೂಲ್‌ನವರು ಅರ್ಜಿ ಹಾಕಿದ್ದರು. ಬೇರೆ ಯಾರೂ ಅರ್ಜಿ ಹಾಕಿದ ಕಾರಣ ಅವರಿಗೆ ಕೊಟ್ಟಿದ್ದರು. ಈಗ 10ರಲ್ಲಿ 8 ಕೆಎಂಎಫ್‌ಗೆ ಕೊಡೋಕೆ ಹೇಳಿದ್ದೇನೆ ಎಂದಿದ್ದರು. ಅಲ್ಲದೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಹ ನಮ್ಮ ಬೆಂಬಲ ಯಾವತ್ತಿಗೂ ನಂದಿನಿಗೆ ಎಂದು ಹೇಳಿದರು. ಇದನ್ನೂ ಓದಿ: ಏನಿಲ್ಲ ಏನಿಲ್ಲ ಅನ್ನುತ್ತಲೇ ಒಂದೇ ಕಾರ್‌ನಲ್ಲಿ ಹೊರಟ ರಶ್ಮಿಕಾ, ದೇವರಕೊಂಡ

ಇನ್ನೂ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆ ಬೆನ್ನಲ್ಲೇ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ BMRCL ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಹಾಗೂ ಕೆಎಂಎಫ್ ಎಂಡಿ ಶಿವಸ್ವಾಮಿ ಹೈವೋಲ್ಟೇಜ್ ಮೀಟಿಂಗ್ ನಡೆಸಿದ್ದರು. ಡಿಸಿಎಂ ಹೇಳಿದಂತೆ 8 ಕಡೆ ನಂದಿನಿ ಮಳಿಗೆಗಳು ಓಪನ್ ಮಾಡಲು ಹಾಗೂ ಸರ್ಕಾರದ ನಿರ್ದೇಶನದಂತೆ 2 ಕಡೆಗಳಲ್ಲಿ ಮಾತ್ರ ಅಮೂಲ್‌ಗೆ ಅವಕಾಶ ನೀಡಲಾಗುವುದು ಎಂದರು. ಇದನ್ನೂ ಓದಿ: ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದು – ವಿಧಾನಸೌಧಕ್ಕೆ ಶಿಫ್ಟ್

ಇನ್ನೂ ಮೀಟಿಂಗ್ ನಂತರ ಮಾತನಾಡಿದ ಕೆಎಂಎಫ್ (KMF) ಎಂಡಿ ಶಿವಸ್ವಾಮಿ, ನಗರದ 20 ಮೆಟ್ರೋ ನಿಲ್ದಾಣದಲ್ಲಿ ರಿಯಾಯಿತಿ ದರದಲ್ಲಿ ನಂದಿನಿ ಮಳಿಗೆ ತೆಗೆಯಲು BMRCL ಅವಕಾಶ ಕೊಡ್ತೇವೆ. ಈ ಹಿಂದೆ 2020-22ರಲ್ಲಿ ಮೆಟ್ರೋ ನಿಲ್ದಾಣದಲ್ಲಿ ಮಳಿಗೆ ತೆರೆಯಲು BMRCL ಟೆಂಡರ್ ಕರೆದಿತ್ತು. ಆಗ ಕೆಎಂಎಫ್ ಈ ಟೆಂಡರ್‌ನಲ್ಲಿ ಭಾಗಿ ಆಗಿರಲಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಮಳಿಗೆ ಇರಲಿದೆ ಎಂದಿದ್ದಾರೆ.

Share This Article