ಗೊರವನಹಳ್ಳಿ ದೇಗುಲಕ್ಕೆ ಹೋಗುವಾಗ ಕಾರು ಪಲ್ಟಿ- ಓರ್ವ ದುರ್ಮರಣ

Public TV
0 Min Read

ಚಿತ್ರದುರ್ಗ: ಮಹೀಂದ್ರ ಜೈಲೋ ಕಾರು ಪಲ್ಟಿಯಾಗಿ ಒಬ್ಬ ಮೃತಪಟ್ಟು 8 ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಯರಬಳ್ಳಿ ಗ್ರಾಮದಲ್ಲಿ ನಡೆದಿದೆ.

ಮೋಹನ್ (45) ಮೃತ ದುರ್ದೈವಿ. ಮೋಹನ್ ಮೂಲತಃ ಚಳ್ಳಕೆರೆ ಪಟ್ಟಣ ನಿವಾಸಿಯಾಗಿದ್ದಾರೆ. ಇವರು ಚಳ್ಳಕೆರೆಯಿಂದ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಲಕ್ಷ್ಮೀ ದೇಗುಲಕ್ಕೆ ತೆರಳುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿ ಆಗಿದೆ.

ಈ ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *