ಉಡುಪಿ: ಹಳೆ ಸರ್ಕಾರಿ ಬಸ್ಸು ನಿಲ್ದಾಣದ ಬಳಿ ಇರುವ ವಸತಿಗೃಹದಲ್ಲಿ ಯಾತ್ರಾರ್ಥಿಯೊಬ್ಬರು ಕುಳಿತ ಕುರ್ಚಿಯಲ್ಲಿಯೇ ಸಾವನಪ್ಪಿರುವ ಘಟನೆ ನಡೆದಿದೆ.
ವ್ಯಕ್ತಿ ಕೊಠಡಿಯಿಂದ ಹೊರಬಾರದಿರುವುದನ್ನು ಗಮನಿಸಿದ ಲಾಡ್ಜ್ನ ಸಿಬ್ಬಂದಿ ಸಂಶಯಪಟ್ಟು ಬಾಗಿಲು ತೆರೆದು ನೋಡಿದಾಗ ವ್ಯಕ್ತಿ ಮೃತಪಟ್ಟಿರುವುದು ಕಂಡುಬಂದಿದೆ. ಮೃತ ವ್ಯಕ್ತಿಯನ್ನು ದಾವಣಗೆರೆಯ ನಿವಾಸಿ ಮಹಾಂತೇಶ ಎಂ.ಜಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕುಡಿಯೋದು ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ!
ಈ ವ್ಯಕ್ತಿ ಮನೆಯಲ್ಲಿ, ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ಬಂದಿದ್ದರೆಂದು ತಿಳಿದುಬಂದಿದೆ. ನಗರ ಪೋಲಿಸ್ ಠಾಣೆಯ ಎಸ್‌ಐ ನಾರಾಯಣ, ಎಎಸ್‌ಐ ಹರೀಶ್, ಹೆಡ್ ಕಾನ್‌ಸ್ಟೇಬಲ್ ಆಶಾಲತಾ ಕಾನೂನು ಪ್ರಕ್ರಿಯೆಯನ್ನು ಮೃತನ ಹೆಂಡತಿ ಹಾಗೂ ಅಣ್ಣನ ಸಮಕ್ಷಮದಲ್ಲಿ ನಡೆಸಿದರು.
ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು. ಸಾವಿಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಅನಾರೋಗ್ಯದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇದನ್ನೂ ಓದಿ: ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿ ಜೈಲಿನಲ್ಲೇ ಹತ್ಯೆ

