ದಕ್ಷಿಣ ಕೊರಿಯಾ | ಲ್ಯಾಂಡಿಂಗ್ ಗೇರ್‌ ವೈಫಲ್ಯದಿಂದ ವಿಮಾನ ಪತನ – 179 ಮಂದಿ ದುರ್ಮರಣ

Public TV
1 Min Read

ಸಿಯೋಲ್: 181 ಜನ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡ ಘಟನೆ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 179 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಜಿಯೋಲ್ಲಾ ಪ್ರಾಂತ್ಯದಲ್ಲಿ ಈ ಅಪಘಾತ ಸಂಭವಿಸಿದೆ. ಜೆಜು ಏರ್ ಫ್ಲೈಟ್ 2216 ಥೈಲ್ಯಾಂಡ್‌ನಿಂದ ಹಿಂದಿರುಗಿತ್ತು. ವಿಮಾನದಲ್ಲಿದ್ದ 181 ಜನರಲ್ಲಿ 175 ಮಂದಿ ಪ್ರಯಾಣಿಕರು ಮತ್ತು 6 ಮಂದಿ ವಿಮಾನ ಸಿಬ್ಬಂದಿ ಸೇರಿದ್ದಾರೆ. ಲ್ಯಾಂಡಿಂಗ್ ಗೇರ್‌ ಸಮಸ್ಯೆಯಿಂದ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲ್ಯಾಂಡಿಂಗ್ ವಿಫಲವಾದ ಬಳಿಕ ವಿಮಾನವು ನಿಲ್ದಾಣದ ತಡೆಗೋಡೆಗೆ ಅಪ್ಪಳಿಸಿದೆ. ಇದರಿಂದ ದೊಡ್ಡ ಸ್ಫೋಟ ಸಂಭವಿಸಿದೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಕ್ಕಿಗಳಿಗೆ ವಿಮಾನ ಡಿಕ್ಕಿಯಾದ ಪರಿಣಾಮ ಲ್ಯಾಂಡಿಂಗ್ ಗೇರ್ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share This Article