ಚಿಕ್ಕಬಳ್ಳಾಪುರ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಪಣ: ಪ್ರದೀಪ್ ಈಶ್ವರ್

Public TV
1 Min Read

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ಪಣ ತೊಡಲಾಗಿದೆ. ಕಾನೂನು ಮೀರಿ ಯಾರೇ ನಡೆದುಕೊಂಡರೂ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಚಿಕ್ಕಬಳ್ಳಾಪುರ (Chikkaballapura) ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಪ್ರದೀಪ್ ಈಶ್ವರ್ (Pradeep‌ Eshwar) ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ ನಗರದ ತಾಲೂಕು ಕಚೇರಿಯಲ್ಲಿ ನೂತನ ಶಾಸಕರ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಪ್ರತಿದಿನ ಬೆಳಗ್ಗೆ 6ರಿಂದ 9 ಗಂಟೆಯವರೆಗೆ ನಮಸ್ತೆ ಚಿಕ್ಕಾಬಳ್ಳಾಪುರ ಕಾರ್ಯಕ್ರಮ ಮಾಡುತ್ತಿದ್ದೇನೆ. ಇನ್ನೂ ಜನರಿಗೆ ಹತ್ತಿರವಾಗುವ ಸಲುವಾಗಿ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಶಾಸಕರ ಕಚೇರಿಯಲ್ಲಿ ಸಹ ಜನರ ಸಮಸ್ಯೆ ಆಲಿಸುತ್ತೇನೆ ಎಂದರು. ಇದನ್ನೂ ಓದಿ: ಕಾವೇರಿ ನಿವಾಸವನ್ನು ತೊರೆದ ಯಡಿಯೂರಪ್ಪ- ಸಿಎಂಗಳಿಗೆ ಇದು ಅದೃಷ್ಟದ ಮನೆ ಯಾಕೆ?

ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಹಳ್ಳಿಗಳಲ್ಲಿ ಮನೆ ಮನೆಗೆ ಹೋಗುತ್ತೇನೆ. ಅಲ್ಲದೇ ವಾರಕ್ಕೆ ಒಂದು ಅಥವಾ ಎರಡು ದಿನ ಪಂಚಾಯಿತಿ ಕಟ್ಟೆಯಲ್ಲಿ ಜನತಾ ದರ್ಶನ ಇಡುತ್ತೇನೆ. ನಾನು ಎಲ್ಲರನ್ನೂ ಕಾಪಾಡಿಕೊಳ್ಳುತ್ತೇನೆ. ನಗರದಲ್ಲಿ ನನ್ನದು ಸೇರಿದಂತೆ ಯಾವುದೇ ಫ್ಲೆಕ್ಸ್ಗಳು ಇರಬಾರದು. ಸರ್ಕಾರಿ ಶಾಲಾ ಕಾಲೇಜುಗಳನ್ನು ಉತ್ತಮ ರಕ್ಷಣೆಯೊಂದಿಗೆ ನಡೆಸುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಪೊಲೀಸ್ ಇಲಾಖೆಯಲ್ಲಿ ಸೆಲ್ಯೂಟ್, ಒದೆನೂ ಸಿಗುತ್ತೆ, ಗುಂಡು ಹಾರಿಸೋದು ಇರುತ್ತೆ: ಜಿ ಪರಮೇಶ್ವರ್

ಪ್ಲಾಸ್ಟಿಕ್ (Plastic) ಅನ್ನು ಮೊದಲು ಬ್ಯಾನ್ ಮಾಡಿರುವುದು ಕರ್ನಾಟಕ. ಆದರೆ ಅದನ್ನು ಸರಿಯಾಗಿ ಜಾರಿಗೊಳಿಸಿಲ್ಲ. ರಾಜಾರೋಷವಾಗಿ ಪ್ಲಾಸ್ಟಿಕ್ ಅನ್ನು ಬಳಸುತ್ತಿದ್ದಾರೆ. ದಯವಿಟ್ಟು ಯಾರೂ ಪ್ಲಾಸ್ಟಿಕ್ ಬಳಕೆ ಮಾಡಬೇಡಿ. ಯಾರೋ 10% ವರ್ತಕರು ಮಾಡುವ ಕೆಲಸಕ್ಕೆ ಉಳಿದ 90% ವರ್ತಕರಿಗೆ ಕೆಟ್ಟ ಹೆಸರು ಬರುತ್ತಿದೆ. ಒಂದು ಸಲ ಎಚ್ಚರಿಕೆ ಕೊಡುತ್ತೇವೆ. ಪದೇ ಪದೇ ಅದೇ ತಪ್ಪನ್ನು ಮಾಡಿದರೆ ದೂರು ದಾಖಲಿಸಿ ಶಿಕ್ಷೆ ನೀಡಲಾಗುತ್ತದೆ ಎಂದು ಖಡಕ್ ವಾರ್ನಿಂಗ್ ನೀಡಿದರು. ಇದನ್ನೂ ಓದಿ: ಮಹಿಳೆಯರ ಉಚಿತ ಬಸ್ ಪ್ರಯಾಣ- ಪುರುಷರಿಗೆ ಟೆನ್ಶನ್ ಶುರು!

Share This Article