ಡೆಹ್ರಾಡೂನ್: ಪ್ರವಾಹ (Flood) ಮತ್ತು ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಗುರುವಾರ ಉತ್ತರಾಖಂಡಕ್ಕೆ (Uttarakhand) ಭೇಟಿ ನೀಡಿದರು.
ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಗವರ್ನರ್ ಲೆಫ್ಟಿನೆಂಟ್ ಜನರಲ್ ಗುರುಪ್ರೀತ್ ಸಿಂಗ್ ಸ್ವಾಗತಿಸಿದರು. ತಮ್ಮ ಭೇಟಿಯ ಸಮಯದಲ್ಲಿ ಮೋದಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಅಲ್ಲದೇ ಪ್ರವಾಹ ಪೀಡಿತ ಕುಟುಂಬಗಳೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಪ್ರವಾಹ ಮತ್ತು ಮಳೆ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಮೋದಿ 1,200 ಕೋಟಿ ರೂ.ಗಳ ಆರ್ಥಿಕ ನೆರವನ್ನು ಘೋಷಿಸಿದ್ದಾರೆ. ಇದನ್ನೂ ಓದಿ: ನೇಪಾಳ ದಂಗೆ | Gen-Z ನಲ್ಲಿ ಬಿರುಕು – ಮಧ್ಯಂತರ ಪ್ರಧಾನಿ ಹುದ್ದೆಗೆ ಸುಶೀಲಾ ಕರ್ಕಿ Vs ಕುಲ್ಮನ್ ನಡ್ವೆ ಫೈಟ್
ಅಲ್ಲದೇ ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಸಹ ಘೋಷಿಸಿದರು. ಪ್ರವಾಹ ಮತ್ತು ಭೂಕುಸಿತದಿಂದ ಅನಾಥರಾದ ಮಕ್ಕಳಿಗೆ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯಡಿಯಲ್ಲಿ ಸಂಪೂರ್ಣ ಸಹಾಯ ನೀಡುವುದಾಗಿ ಮೋದಿ ಭರವಸೆ ನೀಡಿದರು. ಇದನ್ನೂ ಓದಿ: ಅಲ್ಪಸಂಖ್ಯಾತರ ಹಿಂದುಳಿದ ಕಾಲೋನಿಗಳ ಅಭಿವೃದ್ಧಿಗೆ 398 ಕೋಟಿ ರಿಲೀಸ್ – ಸಂಪುಟ ನಿರ್ಧಾರಕ್ಕೆ ಬಿಜೆಪಿ ತೀವ್ರ ಟೀಕೆ
ಇನ್ನು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಆಪ್ದಾ ಮಿತ್ರ ಸ್ವಯಂಸೇವಕರೊಂದಿಗೆ ಸಂವಾದ ನಡೆಸಿದ ಮೋದಿ ಅವರ ನಿರಂತರ ಕೆಲಸ ಹಾಗೂ ಪ್ರಯತ್ನವನ್ನು ಶ್ಲಾಘಿಸಿದರು. ಪೀಡಿತ ಪ್ರದೇಶಗಳಲ್ಲಿ ಹಾನಿಗೊಳಗಾದ ಮೂಲಸೌಕರ್ಯಗಳ ಪುನಃಸ್ಥಾಪನೆ ಮತ್ತು ಪುನರ್ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದೆ. ಹವಾಮಾನ ವೈಪರೀತ್ಯದಿಂದಾಗಿ ಮೋದಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲು ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಸಾಹಸಸಿಂಹ ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ