ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನತೆ ಕಡಿಮೆಯಾಗುತ್ತಿದ್ದಂತೆಯೇ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಲೋಕ ಕಲ್ಯಾಣ ಮಾರ್ಗ್‌ನಲ್ಲಿರುವ ಪಿಎಂ ನಿವಾಸದಲ್ಲಿ ಭೇಟಿ ಬುಧವಾರ ವಾಂಗ್ ಯಿ ಭೇಟಿಯಾದರು. ವಿದೇಶಾಂಗ ಸಚಿವ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಬಳಿಕ ಮೋದಿ ಭೇಟಿ ಮಾಡಿದ್ದಾರೆ.
ಗಾಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಭೇಟಿ ಕೊಟ್ಟಿದ್ದಾರೆ. ಎರಡು ದೇಶಗಳ ನಡುವೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ. ಅಮೆರಿಕಾದ ಟ್ಯಾರಿಫ್ ಬಗ್ಗೆಯೂ ಚರ್ಚೆ ನಡೆಸಲಾಗಿದೆ.
ಇದೇ ವೇಳೆ, ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಗೆ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನವನ್ನು ವಾಂಗ್ ಯಿ, ಮೋದಿಗೆ ಹಸ್ತಾಂತರಿಸಿದ್ದಾರೆ.
2020 ರ ಪೂರ್ವ ಲಡಾಖ್ ಗಡಿ ಬಿಕ್ಕಟ್ಟಿನ ನಂತರ ಮಿಲಿಟರಿ ಮತ್ತು ರಾಜತಾಂತ್ರಿಕ ಚರ್ಚೆಗಳನ್ನು ಮುಂದುವರಿಸುವ ಬಗ್ಗೆ ಚರ್ಚೆಗಳ ಮೇಲೆ ಈ ಸಭೆ ಕೇಂದ್ರೀಕರಿಸಿತು. ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಮೋದಿ ಒತ್ತಿ ಹೇಳಿದ್ದಾರೆ. ಗಡಿ ಪ್ರಶ್ನೆಯ ನ್ಯಾಯಯುತ, ಸಮಂಜಸ ಮತ್ತು ಪರಸ್ಪರ ಸ್ವೀಕಾರಾರ್ಹ ಪರಿಹಾರಕ್ಕೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ರಷ್ಯಾದ ತೈಲ ಖರೀದಿಗಾಗಿ ಭಾರತದ ಮೇಲೆ ಟ್ರಂಪ್ ಭಾರಿ ಸುಂಕ ವಿಧಿಸಿದ ಮಧ್ಯೆ ಈ ಸಭೆ ನಡೆದಿದೆ. ಮುಂಬರುವ SCO ಶೃಂಗಸಭೆಗೆ ಪೂರ್ವಭಾವಿಯಾಗಿ ಮೂರು ದಿನಗಳ ಭೇಟಿಯ ಭಾಗವಾಗಿ ವಾಂಗ್ ಯಿ ಭಾರತಕ್ಕೆ ಬಂದಿದ್ದಾರೆ.