ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ದುರಂತ – 6 ಮಂದಿಯ ಕುಟುಂಬಕ್ಕೆ 25 ಲಕ್ಷ ಪರಿಹಾರ

Public TV
2 Min Read

ಆಂಧ್ರಪ್ರದೇಶ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಮೃತಪಟ್ಟ 6 ಮಂದಿ ಕುಟುಂಬಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ್ ರೆಡ್ಡಿ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಹಾರ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ 5 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೂ ಸೂಚಿಸಿದ್ದಾರೆ. ಇದನ್ನೂ ಓದಿ: ಔಷಧಿ ಘಟಕದಲ್ಲಿ ಅಗ್ನಿ ದುರಂತ: 6 ಮಂದಿ ಸಾವು

cm jagan mohan reddy

ಘಟನೆ ಕುರಿತು ವಿಷಾದ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ಎಲ್ಲೂರಿನ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಅವಘಡದಿಂದ ಪ್ರಾಣಹಾನಿಯಾಗಿರುವುದು ನೋವು ತಂದಿದೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ’ ಎಂದು ಹಾರೈಸಿದ್ದಾರೆ.

ಏನಿದು ಅಗ್ನಿ ದುರಂತ?
ಇಲ್ಲಿನ ಆಂಧ್ರಪ್ರದೇಶದ ಎಲ್ಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೇಂನಲ್ಲಿರುವ ಫಾರ್ಮಾ ಉತ್ಪಾದನಾ ಘಟಕದಲ್ಲಿ ಭಾರೀ ಅಗ್ನಿದುರಂತ ಸಂಭವಿಸಿದ್ದು, ದುರಂತದಲ್ಲಿ 6 ಮಂದಿ ಸಜೀವ ದಹನವಾಗಿ 15 ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ಎಲ್ಲಾ ಪ್ರಧಾನಿಗಳ ಕಥೆ ಹೇಳುವ ಮ್ಯೂಸಿಯಂ ಉದ್ಘಾಟಿಸಲಿದ್ದಾರೆ ಮೋದಿ – ವಿಶೇಷತೆ ಏನು?

ಘಟನೆ ಸಂಬಂಧ ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಬಿ.ಶ್ರೀನಿವಾಸುಲು, ಕೆಲಸ ಸಮರ್ಥವಾಗಿ ನಿಭಾಯಿಸದೇ ಅನಿಲ ಸೋರಿಕೆಯಾಗಿ, ಸ್ಪೋಟಕ್ಕೆ ಕಾರಣವಾಗಿದೆ. ಔಷಧಿ ಹಾಗೂ ಕೆಮಿಕಲ್‌ಗಳನ್ನು ತಯಾರಿಸುವ ಪೋರಸ್ ಲ್ಯಾಬೋರೇಟರೀಸ್ ಪ್ರೈವೇಟ್ ಲಿಮಿಟೆಡ್‌ನ ಘಟಕದಲ್ಲಿ ಸ್ಫೋಟ ಸಂಭವಿಸಿದಾಗ 20ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದರು. ಘಟನೆ ಬಳಿಕ ಸ್ಥಳಕ್ಕಾಗಿಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ಹತ್ತಿರದ ಕಾಲೋನಿಗಳಿಂದ ಜನರನ್ನು ಸ್ಥಳಾಂತರಿಸಿ, ರಕ್ಷಣೆ ಮಾಡಲಾಗಿದೆ. ಸ್ಪೋಟ ಸಂಭವಿಸಿದ ಒಂದೆರಡು ಗಂಟೆಗಳಲ್ಲೇ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲಾಗಿದೆ ಎಂದು ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಇಲ್ಲದೆ ತೃತೀಯ ರಂಗ ಸಾಧ್ಯವಿಲ್ಲ: ಶರದ್ ಪವಾರ್

MODI

ಐವರು ಕಾರ್ಮಿಕರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದು, ಮತ್ತೋರ್ವ ಕಾರ್ಮಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಕೆಲ ಕಾರ್ಮಿಕರನ್ನು ವಿಜಯವಾಡ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ದೇವ್ ಶರ್ಮಾ, ಅನಿಲ ಸೋರಿಕೆಗೆ ನಿಖರ ಕಾರಣ ಪತ್ತೆ ಮಾಡಲಾಗುತ್ತಿದೆ ಎಂದು ಹೇಳಲಾಗಿತ್ತು.

ಗುಜರಾತ್‌ನಲ್ಲೂ ಕಾರ್ಖಾನೆ ಸ್ಪೋಟಗೊಂಡಿತ್ತು:
ಅಹಮದಾಬಾದ್‌ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ರಾಸಾಯನಿಕ ಕಾರ್ಖಾನೆಯೊಂದು ಮುಂಜಾನೆ ವೇಳೆ ಸ್ಫೋಟಗೊಂಡಿದ್ದು, 6 ಮಂದಿ ಕಾರ್ಮಿಕರು ಮೃತಪಟ್ಟಿರುವ ದುರಂತ ನಡೆದಿತ್ತು.

Share This Article
Leave a Comment

Leave a Reply

Your email address will not be published. Required fields are marked *