ಪ್ರಧಾನಿ ಮೋದಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಗೌರವ

Public TV
2 Min Read

ಬ್ರೆಸಿಲಿಯಾ: ಬ್ರೆಜಿಲ್ (Brazil) ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ `ಗ್ರ‍್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಬ್ರೆಸಿಲಿಯಾದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನಿ ಮೋದಿಯವರಿಗೆ ಪ್ರದಾನ ಮಾಡಿದರು. ಇದನ್ನೂ ಓದಿ: ಗುಜರಾತ್‌| ಮಧ್ಯದಲ್ಲೇ ಕುಸಿದ ಸೇತುವೆ – 5 ವಾಹನಗಳು ನದಿಗೆ, ಮೂವರು ಬಲಿ

ಭಾರತ ಮತ್ತು ಬ್ರೆಜಿಲ್ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸಲು ಮತ್ತು ಬ್ರಿಕ್ಸ್, ಜಿ-20 ಮತ್ತು ಯುಎನ್‌ನಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿಯವರ ಕೊಡುಗೆಗಳನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ. ಮೋದಿ ಅವರು ಮೇ 2014ರಲ್ಲಿ ಪ್ರಧಾನಿಯಾದ ನಂತರ ವಿವಿಧ ದೇಶಗಳಿಂದ ಸಿಕ್ಕ 26ನೇ ಅಂತರರಾಷ್ಟ್ರೀಯ ಪ್ರಶಸ್ತಿಯಾಗಿದೆ. ಇದನ್ನೂ ಓದಿ: 77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌

ಈ ಗೌರವ ಪಡೆದ ನಂತರ ಮಾತನಾಡಿದ ಪ್ರಧಾನಿ ಮೋದಿ ಅವರು, ಅಧ್ಯಕ್ಷ ಲುಲಾ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇಂದು ನನಗೆ ಮಾತ್ರವಲ್ಲ, 140 ಕೋಟಿ ಭಾರತೀಯರಿಗೂ ಹೆಮ್ಮೆಯ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಏಕೆಂದರೆ ನನಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಗೌರವವನ್ನು ನೀಡಲಾಗಿದೆ. ನಾನು ಬ್ರೆಜಿಲ್ ಸರ್ಕಾರ ಮತ್ತು ಬ್ರೆಜಿಲ್ ಜನರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

Share This Article