ರೇವಂತ್ ರೆಡ್ಡಿಗೆ ಶುಭಕೋರಿ ಬೆಂಬಲದ ಭರವಸೆ ಕೊಟ್ಟ ಪ್ರಧಾನಿ ಮೋದಿ

Public TV
1 Min Read

ನವದೆಹಲಿ: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ರೇವಂತ್ ರೆಡ್ಡಿಗೆ (Revanth Reddy) ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಅಲ್ಲದೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

ಹೈದರಾಬಾದ್‍ನ ಎಲ್‍ಬಿ ಸ್ಟೇಡಿಯಂನಲ್ಲಿ (LB Stadium Hyderabad) ನಡೆದ ಅದ್ಧೂರಿ ಸಮಾರಂಭದಲ್ಲಿ ರೇವಂತ್ ರೆಡ್ಡಿ ಸೇರಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲೆ ತಮಿಳಿಸೈ ಸುಂದರರಾಜನ್ ಅವರು ಪ್ರಮಾಣವಚನ ಬೋಧಿಸಿದರು. ರೇವಂತ್ ರೆಡ್ಡಿಯವರು ತೆಲಂಗಾಣ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆಯೇ ಮೋದಿಯವರು (Narendra Modi) ಎಕ್ಸ್ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಎಕ್ಸ್ ನಲ್ಲಿ ಏನಿದೆ..?: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ರೇವಂತ್ ರೆಡ್ಡಿಯವರಿಗೆ ಅಭಿನಂದನೆಗಳು. ರಾಜ್ಯದ ಪ್ರಗತಿ ಮತ್ತು ನಾಗರಿಕರ ಕಲ್ಯಾಣಕ್ಕಾಗಿ ನನ್ನಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಇದನ್ನೂ ಓದಿ: ‘ಮೋದಿ ಜೀ’ ಕರೆದು ಸಾರ್ವಜನಿಕರಿಂದ ನನ್ನ ದೂರ ಮಾಡ್ಬೇಡಿ: ಪ್ರಧಾನಿ ಮನವಿ

ಪ್ರಮಾಣವಚನದ ವೇಳೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ಉಪಸ್ಥಿತರಿದ್ದರು.

Share This Article