ಅಕ್ಷಯ್ ತಾಯಿಯ ಸಾವಿಗೆ ಮಿಡಿದ ಮೋದಿ ಹೃದಯ

Public TV
2 Min Read

ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ಬುಧವಾರ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಸಂತಾಪವನ್ನು ಸೂಚಿಸಿದ್ದಾರೆ.

ಅಕ್ಷಯ್ ತಾಯಿ ಸಾವಿಗೆ ಸಂತಾಪ ಸೂಚಿಸಿದ ಮೋದಿ ಅವರ ಪತ್ರವನ್ನು ಟ್ವಿಟರ್ ನಲ್ಲಿ ಹಾಕಿ, ನನ್ನ ಅಮ್ಮನ ನಿಧನಕ್ಕೆ ನಿಮ್ಮೆಲ್ಲರ ಸಂತಾಪ ಕೇಳಿ ನನ್ನ ಹೃದಯ ತುಂಬಿ ಬಂದಿದೆ. ಅದರಲ್ಲಿಯೂ ನಮ್ಮ ಪ್ರಧಾನಿ ಮೋದಿ ಅವರ ಈ ಸಂದೇಶದಿಂದ ನನಗೆ ತುಂಬಾ ಖುಷಿಯಾಗುತ್ತಿದೆ. ಇದಕ್ಕೆ ನಾನು ಕೃತಜ್ಞನಾಗಿದ್ದೇನೆ. ಈ ಸಮಾಧಾನಕರ ಮಾತುಗಳು ನನ್ನೊಂದಿಗೆ ಶಾಶ್ವತವಾಗಿ ಉಳಿಯುತ್ತವೆ. ಜೈ ಅಂಬೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಗಣಪತಿಯ ಕುತ್ತಿಗೆಗೆ ಸುತ್ತಿಕೊಂಡ ನಾಗರ 

ಅಕ್ಷಯ್ ಅವರ ತಾಯಿ ಅರುಣಾ ಭಾಟಿಯಾ ತುಂಬಾ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರುಣಾ ಭಾಟಿಯಾ ಮೃತಪಟ್ಟಿದ್ದರು. ಇದನ್ನೂ ಓದಿ:  ನೀಟ್ ಪರೀಕ್ಷೆ – ಲಾಠಿ ಹಿಡಿದು ಪೋಷಕರನ್ನು ಚದುರಿಸಿದ ಪೊಲೀಸರು

ಈ ಹಿಂದೆ ಅಕ್ಷಯ್ ಅವರ ತಾಯಿ ಸಾವನ್ನಪ್ಪಿದ ಬಳಿಕ ಟ್ವಿಟರ್ ನಲ್ಲಿ, ನಾನು ಇಂದು ನನ್ನ ಅಸ್ತಿತ್ವವನ್ನು ಕಳೆದುಕೊಂಡಿದ್ದೇನೆ. ನನ್ನ ಮೂಲವನ್ನು ಕಳೆದುಕೊಂಡಿರುವುದಕ್ಕೆ ನನಗೆ ತುಂಬಾ ನೋವಾಗುತ್ತಿದೆ. ನನ್ನ ಅಮ್ಮ ಅರುಣಾ ಭಾಟಿಯಾ ಇಂದು ನಮ್ಮನ್ನು ಅಗಲಿದ್ದಾರೆ. ಈ ಜಗತ್ತನ್ನು ತೊರೆದು ನನ್ನ ತಂದೆ ಜೊತೆ ಸೇರಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಈ ಹಿನ್ನೆಲೆ ಇವರ ಅಭಿಮಾನಿಗಳು ಮತ್ತು ಸಂಬಂಧಿಕರು ಸಂತಾಪವನ್ನು ಸೂಚಿಸಿದ್ದರು. ಇದನ್ನೂ ಓದಿ:  ಸಮಯ ಪ್ರಜ್ಞೆ ಮೆರೆದ KSRTC ಚಾಲಕ – 50ಕ್ಕೂ ಅಧಿಕ ಮಂದಿ ಪ್ರಯಾಣಿಕರು ಪಾರು

Share This Article
Leave a Comment

Leave a Reply

Your email address will not be published. Required fields are marked *