ಗಾಂಧಿನಗರ: ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ (Cruise Terminal) ಅನ್ನು ಪ್ರಧಾನಿ ಮೋದಿ (Narendra Modi) ಶನಿವಾರ ಉದ್ಘಾಟಿಸಿದ್ದಾರೆ.
ಗುಜರಾತ್‌ನ (Gujarat) ಭಾವನಗರದಲ್ಲಿ ನಡೆದ ‘ಸಮುದ್ರದಿಂದ ಸಮೃದ್ಧಿ’ ಕಾರ್ಯಕ್ರಮದ ವೇಳೆ ಪ್ರಧಾನಿ ಮೋದಿ ಈ ಉದ್ಘಾಟನೆ ಮಾಡಿದರು. ಅಲ್ಲದೇ 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಯೋಜನೆಗಳನ್ನು ಅನಾವರಣಗೊಳಿಸಿ, ಶಂಕುಸ್ಥಾಪನೆ ನೇರವೇರಿಸಿದರು. ಇದನ್ನೂ ಓದಿ: H-1B Visa ಹೊಂದಿರುವವರು 24 ಗಂಟೆಯೊಳಗೆ ಅಮೆರಿಕಗೆ ವಾಪಸ್ ಬನ್ನಿ: ಮೆಟಾ, ಮೈಕ್ರೋಸಾಫ್ಟ್ ಸೂಚನೆ
ಇಂದಿರಾ ಡಾಕ್‌ನಲ್ಲಿರುವ ಈ ಅತ್ಯಾಧುನಿಕ ಸೌಲಭ್ಯವು ಭಾರತೀಯ ಕ್ರೂಸ್ ಪ್ರವಾಸೋದ್ಯಮಕ್ಕೆ ಮಹತ್ವದ ದ್ವಾರವಾಗಿ ಹೊರಹೊಮ್ಮಲಿದೆ. ಭಾರತದ ಮಹತ್ವಾಕಾಂಕ್ಷೆಯ ಬಂದರು ಅಭಿವೃದ್ಧಿ ಉಪಕ್ರಮದ ಭಾಗವಾಗಿ ನಿರ್ಮಿಸಲಾದ ಈ ಕ್ರೂಸ್ ಟರ್ಮಿನಲ್ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತದೆ. 4,15,000 ಚದರ ಅಡಿಗಳಿಗೂ ಹೆಚ್ಚು ವಿಸ್ತೀರ್ಣ ಹೊಂದಿರುವ ಮುಂಬೈ ಅಂತಾರಾಷ್ಟ್ರೀಯ ಕ್ರೂಸ್ ಟರ್ಮಿನಲ್ ಅನ್ನು ವರ್ಷಕ್ಕೆ 1 ಮಿಲಿಯನ್ ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪ್ಲಾನ್ ಮಾಡಿ ನಿರ್ಮಿಸಲಾಗಿದೆ. ಇದನ್ನೂ ಓದಿ: ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ – ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ
ಇದು ಏಕಕಾಲದಲ್ಲಿ 5 ಕ್ರೂಸ್ ಹಡಗುಗಳಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನು ಪ್ರತಿ ವರ್ಷ 1 ಮಿಲಿಯನ್ ಪ್ರಯಾಣಿಕರನ್ನು ಅಥವಾ ದಿನಕ್ಕೆ ಸುಮಾರು 10,000 ಪ್ರಯಾಣಿಕರನ್ನು ನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ. 72 ಚೆಕ್-ಇನ್ ಮತ್ತು ವಲಸೆ ಕೌಂಟರ್‌ಗಳನ್ನು ಹೊಂದಿರುವ ಟರ್ಮಿನಲ್ ಅನ್ನು ಪ್ರಯಾಣಿಕರಿಗೆ ಸುಗಮ, ಪರಿಣಾಮಕಾರಿ ಮತ್ತು ತೊಂದರೆಮುಕ್ತ ಅನುಭವವನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಇಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ 300ಕ್ಕೂ ಹೆಚ್ಚು ವಾಹನಗಳನ್ನು ಏಕಕಾಲದಲ್ಲಿ ನಿಲ್ಲಿಸಬಹುದಾಗಿದೆ. ಇದನ್ನೂ ಓದಿ: ಜಾತಿ ಕಾಲಂನಲ್ಲಿ ಕುರುಬ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್ ಬಗ್ಗೆ ಸಿಎಂ ಬಳಿ ಕೇಳಿದ್ದೇವೆ – ಎಂ.ಬಿ ಪಾಟೀಲ್