ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಮೋದಿ ಮಾತು; ದುಬೈನಲ್ಲಿ ಕನ್ನಡಾಭಿಮಾನಕ್ಕೆ ಪ್ರಧಾನಿ ಶ್ಲಾಘನೆ

1 Min Read

ನವದೆಹಲಿ: ಮನ್‌ ಕಿ ಬಾತ್‌ನಲ್ಲಿ ಕನ್ನಡ (Kannada) ಭಾಷೆ ಬಗ್ಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ತಮ್ಮ 129 ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ, ಅವರು ತಮ್ಮ ನೆಲದ ಭಾಷೆಯಾದ ಕನ್ನಡದಿಂದ ದೂರ ಆಗುತ್ತಿದ್ದಾರೆಯೇ ಅನ್ನೋ ಆತಂಕ ದುಬೈ ಕನ್ನಡಿಗರಿಗೆ ಬಂತು. ಆಗಿನಿಂದಲೇ ಅವರು ದುಬೈನಲ್ಲಿ ಕನ್ನಡ ಪಾಠ ಶಾಲೆ ಆರಂಭ‌ ಮಾಡಿದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ಯಾರಾಗ್ಲೈಡರ್ ಟೇಕಾಫ್‌ ಆದ ಕೆಲಹೊತ್ತಲ್ಲೇ ಅಪಘಾತ; ಪೈಲಟ್ ಸಾವು, ಪ್ರವಾಸಿಗನಿಗೆ ಗಾಯ

ಕನ್ನಡ ಪಾಠಶಾಲೆಯಲ್ಲಿ ಮಕ್ಕಳಿಗೆ ಕನ್ನಡ ಭಾಷೆ ಕಲಿಸುತ್ತಿದ್ದಾರೆ. ಕನ್ನಡ ಓದು, ಬರಹ, ಮಾತಾಡೋದು ಕಲಿಸ್ತಿದ್ದಾರೆ. ಈಗ ಆ ಪಾಠಶಾಲೆಯಲ್ಲಿ ಒಂದು ಸಾವಿರ ಮಕ್ಕಳಿಗೆ ಕನ್ನಡ ಭಾಷೆ ಕಲಿಸುವ ಕೆಲಸ ಆಗ್ತಿದೆ. ಈ ಮೂಲಕ‌ ದುಬೈನಲ್ಲಿ ಇರುವ ಕನ್ನಡಿಗರು ಭಾಷಾಭಿಮಾನ ಮೆರೆಯುತ್ತಿದ್ದಾರೆ. ಕನ್ಮಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ, ಭಾಷೆ ನಮ್ಮ ಹೆಮ್ಮೆಯಾಗಿದೆ ಎಂದು ಹಾಡಿಹೊಗಳಿದ್ದಾರೆ.

ಫಿಜಿಯಲ್ಲಿ ತಮಿಳು ದಿನ ಆಚರಣೆ ಬಗ್ಗೆಯೂ ಮೋದಿ ಮಾತನಾಡಿದ್ದಾರೆ. ಫಿಜಿಯಲ್ಲಿ ಭಾರತೀಯ ಭಾಷೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಶ್ಲಾಘನೀಯ ಉಪಕ್ರಮ ನಡೆಯುತ್ತಿದೆ. ಅಲ್ಲಿನ ಹೊಸ ಪೀಳಿಗೆಯನ್ನು ತಮಿಳು ಭಾಷೆಯೊಂದಿಗೆ ಸಂಪರ್ಕಿಸಲು ವಿವಿಧ ಹಂತಗಳಲ್ಲಿ ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಕಳೆದ ತಿಂಗಳು, ಫಿಜಿಯ ರಾಕಿರಾಕಿ ಪ್ರದೇಶದ ಒಂದು ಶಾಲೆಯು ತನ್ನ ಮೊದಲ ತಮಿಳು ದಿನ ಆಚರಣೆಯನ್ನು ನಡೆಸಿತು. ಈ ದಿನವು ಮಕ್ಕಳಿಗೆ ತಮ್ಮ ಭಾಷೆಯ ಬಗ್ಗೆ ತಮ್ಮ ಹೆಮ್ಮೆಯನ್ನು ವ್ಯಕ್ತಪಡಿಸಲು ವೇದಿಕೆಯನ್ನು ಒದಗಿಸಿತು. ಅವರು ಕವಿತೆಗಳನ್ನು ವಾಚಿಸಿದರು, ಭಾಷಣಗಳನ್ನು ನೀಡಿದರು ಎಂದು ಪ್ರಧಾನಿ ಮಾತನಾಡಿದ್ದಾರೆ. ಇದನ್ನೂ ಓದಿ: ಮೆಟ್ರೋದಲ್ಲಿ ಮೊಬೈಲ್‌ ಸೌಂಡ್‌ ಜಾಸ್ತಿ ಇಡೋದು, ತಿಂಡಿ ತಿನ್ನೋದು ಮಾಡಿದ್ರೆ ಬೀಳುತ್ತೆ ದಂಡ

Share This Article