ಸೆ.13ಕ್ಕೆ ಮಿಜೋರಾಂ, ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ?

By
1 Min Read

-ಹಿಂಸಾಚಾರ ಭುಗಿಲೆದ್ದ 28 ತಿಂಗಳ ಬಳಿಕ ಮೊದಲ ಭೇಟಿ ಸಾಧ್ಯತೆ

ನವದೆಹಲಿ: ಸೆ.13ರಂದು ಮಿಜೋರಾಂ (Mizoram) ಹಾಗೂ ಮಣಿಪುರಕ್ಕೆ (Manipur) ಪ್ರಧಾನಿ ನರೇಂದ್ರ ಮೋದಿ (PM Modi) ಭೇಟಿ ನೀಡುವ ಸಾಧ್ಯತೆಯಿದ್ದು, ಎರಡೂ ರಾಜ್ಯಗಳಲ್ಲಿಯೂ ಎಲ್ಲಾ ಸಿದ್ಧತೆಗಳು ಆರಂಭವಾಗಿದೆ ಎನ್ನಲಾಗುತ್ತಿದೆ.

ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಮೊದಲು ಮಿಜೋರಾಂಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಬೈರಾಬಿ-ಸೈರಾಂಗ್ ರೈಲ್ವೆ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಈ ಯೋಜನೆ ಮೂಲಕ ಈಶಾನ್ಯದಲ್ಲಿ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಕೇಂದ್ರದ ಪ್ರಮುಖ ಮೂಲಸೌಕರ್ಯ ಯೋಜನೆಯಾಗಿದೆ. ಹೊಸ ರೈಲು ಸಂಪರ್ಕವು ಐಜ್ವಾಲ್ ಅನ್ನು ಆಸ್ಸಾಂನ ಸಿಲ್ಚಾರ್‌ನೊಂದಿಗೆ ಮತ್ತು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುತ್ತದೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಶಾಲಾ ಕಟ್ಟಡದಲ್ಲಿ ಬಿರುಕು, ಉದುರುತ್ತಿರುವ ಮೇಲ್ಛಾವಣಿ; ಅವ್ಯವಸ್ಥೆ ಸರಿಪಡಿಸುವಂತೆ ಸಿಎಂಗೆ ಮಕ್ಕಳ ಮನವಿ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಮಿಜೋರಾಂ ಮುಖ್ಯ ಕಾರ್ಯದರ್ಶಿ ಖಿಲ್ಲಿ ರಾಮ್ ಮೀನಾ ಅವರು, ಭದ್ರತೆ, ಸಂಚಾರ ನಿಯಂತ್ರಣ ಮತ್ತು ಸಾರ್ವಜನಿಕ ಭಾಗವಹಿಸುವಿಕೆ ಸೇರಿದಂತೆ ಸಿದ್ಧತೆಗಳನ್ನು ಪರಿಶೀಲಿಸಲು ಸೋಮವಾರ (ಸೆ.1) ಉನ್ನತ ಮಟ್ಟದ ಸಭೆ ನಡೆಸಿದರು. ಮಿಜೋರಾಂ ಭೇಟಿಯ ನಂತರ, ಪ್ರಧಾನಿ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ 28 ತಿಂಗಳ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ. ಈ ಕುರಿತು ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ.ಇದನ್ನೂ ಓದಿ: ಜೂ.ಎನ್‌ಟಿಆರ್‌ಗಾಗಿ ಸಿದ್ಧಸೂತ್ರ ಮುರಿಯಲು ಸಜ್ಜಾದ ಪ್ರಶಾಂತ್ ನೀಲ್

Share This Article