ರಾಷ್ಟ್ರಪತಿ ಭೇಟಿಯಾಗಿ ‘ಆಪರೇಷನ್‌ ಸಿಂಧೂರ’ ಬಗ್ಗೆ ವಿವರಿಸಿದ ಮೋದಿ

By
1 Min Read

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿ, ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನಾ ಪಡೆಗಳು ಪಾಕ್‌ ಮತ್ತು ಪಿಒಕೆ ಉಗ್ರರ ಅಡಗು ತಾಣಗಳ ಮೇಲೆ ನಡೆಸಿರುವ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಭಾರತೀಯ ಸಶಸ್ತ್ರ ಪಡೆಗಳು, ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರವಾದ ದಾಳಿ ನಡೆಸಿದ ಆಪರೇಷನ್‌ ಬಗ್ಗೆ ರಾಷ್ಟ್ರಪತಿಗೆ ವಿವರಿಸಿದ್ದಾರೆ. ಸರ್ಕಾರ ನಾಳೆ ಸರ್ವಪಕ್ಷ ಸಭೆಯನ್ನೂ ಕರೆದಿದೆ. ಇದನ್ನೂ ಓದಿ: ಯಾವುದೇ ದೋಷವಿಲ್ಲದೆ ತನ್ನ ಗುರಿ ಸಾಧಿಸಿದೆ – ಸೇನೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ‘ಆಪರೇಷನ್ ಸಿಂಧೂರ’ ಅನ್ನು ಪ್ರಾರಂಭಿಸಿದವು. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಭಾರತ ಸರ್ಕಾರ ಪ್ರತಿಜ್ಞೆ ಮಾಡಿತ್ತು.

Share This Article