ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ವೈಭವ್ ಸೂರ್ಯವಂಶಿ

Public TV
2 Min Read

ಪಾಟ್ನಾ: ತನ್ನ ಚೊಚ್ಚಲ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲೇ (IPL 20225) ಸ್ಫೋಟಕ ಶತಕ ಸಿಡಿಸಿದ್ದ ರಾಜಸ್ಥಾನ್ ರಾಯಲ್ಸ್‌ ತಂಡದ ಆಟಗಾರ ವೈಭವ್ ಸೂರ್ಯವಂಶಿಯವರನ್ನು (Vaibhav Suryavanshi) ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿಯಾಗಿದ್ದಾರೆ.

ಸೂರ್ಯವಂಶಿ ಮತ್ತು ಅವರ ಪೋಷಕರಿಗೆ ಬಿಹಾರದ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಅವಕಾಶ ಸಿಕ್ಕಿದೆ. ಈ ವೇಳೆ, ವೈಭವ್‌ ಮೋದಿಯವರ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದರು. ವೈಭವ್ ಜೊತೆಗಿನ ಫೋಟೋಗಳನ್ನು ಮೋದಿಯವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ, ವೈಭವ್‌ ಅವರ ಕ್ರಿಕೆಟ್ ಕೌಶಲ್ಯಕ್ಕೆ ದೇಶದೆಲ್ಲೆಡೆ ಮೆಚ್ಚುಗೆ ಸಿಕ್ಕಿದೆ. ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: IPL 2025 | ಒಂದೇ ಒಂದು ತೂಫಾನ್‌ ಶತಕ – ವೈಭವ್‌ಗೆ 10 ಲಕ್ಷ ರೂ. ಬಹುಮಾನ!

ಈ ಋತುವಿನಲ್ಲಿ ಕೇವಲ ಏಳು ಪಂದ್ಯಗಳಲ್ಲಿ ವೈಭವ್‌ 252 ರನ್ ಗಳಿಸಿದ್ದಾರೆ. ಜೈಪುರದಲ್ಲಿ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ 35 ಎಸೆತಗಳಲ್ಲಿ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದರು.

ವೇಗದ ಶತಕ ಸಿಡಿಸಿದ ಮೊದಲ ಭಾರತೀಯ
ತನ್ನ ಚೊಚ್ಚಲ ಪಂದ್ಯದಲ್ಲೇ ಸಿಕ್ಸರ್ ಸಿಡಿಸುವ ಮೂಲಕ ಐಪಿಎಲ್‌ಗೆ ಪದಾರ್ಪಣೆ ಮಾಡಿದ ವೈಭವ್ ಸೂರ್ಯವಂಶಿ 3ನೇ ಪಂದ್ಯದಲ್ಲೇ ಸ್ಫೋಟಕ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದರು. ಗುಜರಾತ್ ಟೈಟಾನ್ಸ್ (Gujarat Titans) ವಿರುದ್ಧ ನಡೆದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು 35 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ ವೇಗದ ಶತಕ ಬಾರಿಸಿದ 2ನೇ ಆಟಗಾರ ಹಾಗೂ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಡೀ ಐಪಿಎಲ್ ಇತಿಹಾಸದಲ್ಲೇ ಅತಿ ವೇಗದ ಶತಕ ಸಿಡಿಸಿದ ಖ್ಯಾತಿ ಕ್ರಿಸ್ ಗೇಲ್ (30 ಎಸೆತ) ಅವರ ಹೆಸರಿನಲ್ಲಿದೆ. ಇದೀಗ 35 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವೈಭವ್ ಸೂರ್ಯವಂಶಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಉಳಿದಂತೆ ಯೂಸೂಫ್ ಪಠಾಣ್ (37 ಎಸೆತ), ಡೇವಿಡ್ ಮಿಲ್ಲರ್ (38 ಎಸೆತ), ಟ್ರಾವಿಸ್ ಹೆಡ್ (39 ಎಸೆತ) ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ ಟಾಪ್-5 ಆಟಗಾರ ಪಟ್ಟಿಯಲ್ಲಿದ್ದಾರೆ. ಇದನ್ನೂ ಓದಿ: 4 ರನ್‌ ಗಳಿಸಿ ವೈಭವ್‌ ವಿಶೇಷ ಸಾಧನೆ – 13ರ ಬಾಲಕನಿಗೆ ಹಿರಿಯ ಕ್ರಿಕೆಟಿಗರಿಂದ ಮೆಚ್ಚುಗೆ

Share This Article