Swabhiman Parv | ಸೋಮನಾಥನ ಸನ್ನಿಧಿಯಲ್ಲಿ ʻಓಂಕಾರʼ ಪಠಿಸಿದ ʻನಮೋʼ

2 Min Read

– ಪ್ರಧಾನಿಯಿಂದ ದೇಶದ ಒಳಿತಿಗಾಗಿ ವಿಶೇಷ ಪ್ರಾರ್ಥನೆ; ಡ್ರೋನ್‌ ಶೋಗೆ ಮೆಚ್ಚುಗೆ

ಗಾಂಧಿನಗರ: ಮೂರು ದಿನಗಳ ಕಾಲ ತವರು ರಾಜ್ಯ ಗುಜರಾತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಐತಿಹಾಸಿಕ ಸೋಮನಾಥ ದೇವಾಲಯದಲ್ಲಿ (Somnath Temple) ವೀಶೇಷ ಪೂಜೆ ಸಲ್ಲಿಸಿದ್ದು, ದೇಶದ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಜ್ಯೋತಿರ್ಲಿಂಗಗಳಲ್ಲಿ ಒಂದಾದ ಗುಜರಾತ್‌ನ (Gujarat) ಶ್ರೀ ಸೋಮನಾಥ ದೇವಾಲಯದ ಮೇಲೆ 1026 ರ ಜನವರಿಯಲ್ಲಿ ಮಹ್ಮದ್‌ ಘಜ್ನಿ ಮೊದಲ ಬಾರಿಗೆ ದಾಳಿ ನಡೆಸಿ ಜ.10ಕ್ಕೆ (ನಿನ್ನೆ) 1,000 ವರ್ಷಗಳು ಕಳೆದಿವೆ. 1 ಸಾವಿರ ವರ್ಷಗಳ ನಂತರವೂ ಸೋಮನಾಥದ ಭವ್ಯತೆ ಮರುಸ್ಥಾಪಿಸಲು ನಡೆದ ಹಲವಾರು ಪ್ರಯತ್ನಗಳ ಫಲವಾಗಿ ಈ ದೇವಾಲಯವು ಇಂದಿಗೂ ವೈಭವದಿಂದ ಕಂಗೊಳಿಸುತ್ತಿದೆ. ಹಾಗಾಗಿ ದೇವಾಲಯದ ಮೇಲೆ ನಡೆದ ಮೊದಲ ದಾಳಿಯ ಸಾವಿರ ವರ್ಷಾಚರಣೆ ಭಾಗವಾಗಿ ʻಸೋಮನಾಥ ಸ್ವಾಭಿಮಾನ ಪರ್ವʼ (Swabhiman Parv) ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮವಾದ ಭಾಗವಾಗಿ ನಡೆಯುತ್ತಿರುವ ಸೋಮನಾಥ ಸ್ವಾಭಿಮಾನ್ ಪರ್ವ್‌ ಕಾರ್ಯಕ್ರಮಲ್ಲಿ ಪಾಲ್ಗೊಂಡು ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥನೆ ಬಳಿಕ ದೇವಾಲಯದಲ್ಲಿ ನಡೆದ ‘ಓಂಕಾರ ಮಂತ್ರ’ ಪಠಣದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!

ಪ್ರಾರ್ಥನೆ ಸಲ್ಲಿಕೆ ಬಳಿಕ ಪ್ರಧಾನಿ ಮೋದಿ ಶ್ರೀ ಸೋಮನಾಥ ಟ್ರಸ್ಟ್‌ನ ಸಭೆಯಲ್ಲಿ ಭಾಗಿಯಾದರು. ಸಭೆಯ ಅಧ್ಯಕ್ಷತೆ ವಹಿಸಿ ದೇವಾಲಯ ಸಂಕೀರ್ಣದಲ್ಲಿನ ಮೂಲಸೌಕರ್ಯಗಳನ್ನ ಮೇಲ್ದರ್ಜೆಗೇರಿಸುವುದು, ಸೋಮನಾಥ ತೀರ್ಥಯಾತ್ರೆಯನ್ನ ಇನ್ನಷ್ಟು ಸ್ಮರಣೀಯವಾಗಿಸುವುದು ಸೇರಿದಂತೆ ಅನೇಕ ವಿಷಯಗಳನ್ನ ಚರ್ಚಿಸಿದ್ರು.

ನಂತರ ಭಾರತದ ಪ್ರಾಚೀನತೆ ಬಿಂಬಿಸುವ ವೀಶೇಷ ಡ್ರೋನ್‌ ಶೋ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಈ ಬೆಳಕಿನ ಕಿರಣವು ಭಾರತದ ಸಾಂಸ್ಕೃತಿಕ ಶಕ್ತಿಯ ಸಂದೇಶವನ್ನು ಇಡೀ ವಿಶ್ವಕ್ಕೆ ಸಾರುತ್ತದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಆವರಣದಲ್ಲಿ ನಮಾಜ್‌ಗೆ ಯತ್ನ – ಕಾಶ್ಮೀರ ಮೂಲದ ವ್ಯಕ್ತಿ ಪೊಲೀಸ್ ವಶಕ್ಕೆ

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರ ಬೆಂಗಾವಲು ವಾಹನ ಶನಿವಾರ ದೇವಸ್ಥಾನ ಅಂಗಳ ತಲುಪುತ್ತಿದ್ದಂತೆ ರಸ್ತೆಯ ಎರಡೂ ಕಡೆ ನಿಂತಿದ್ದ ಜನ ಪುಷ್ಪ ಮಳೆ ಸುರಿಸಿದಿ ಸ್ವಾಗತ ಕೋರಿದರು. ರಸ್ತೆಯುದ್ಧಕ್ಕೂ ʻಮೋದಿ ಮೋದಿʼ ಜಯಘೋಷ ಮೊಳಗಿದವು.

Share This Article