ಸಮಾಜ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ, ರಾಷ್ಟ್ರೀಯ ಶತ್ರುಗಳ ವಿರುದ್ಧ ಹೋರಾಡಬೇಕಿದೆ – ಮೋದಿ ವಾಗ್ದಾಳಿ

Public TV
1 Min Read

ನವದೆಹಲಿ: ಪಟ್ಟಭದ್ರ ಹಿತಾಸಕ್ತಿಗಳಿಗಳು ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ, 2047ರ ವೇಳೆಗೆ ಭಾರತವನ್ನು (India) ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ತನ್ನ ʻರಾಷ್ಟ್ರೀಯ ಶತ್ರುಗಳʼ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಕರೆ ನೀಡಿದ್ದಾರೆ.

ಶ್ರೀ ಸ್ವಾಮಿನಾರಾಯಣ ದೇವಸ್ಥಾನದ 200ನೇ ವಾರ್ಷಿಕೋತ್ಸವದ ಹಿನ್ನಲೆ ಗುಜರಾತ್‌ನ (Gujarat) ವಡ್ತಾಲ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸಮಾಜವನ್ನು ಜಾತಿ, ಧರ್ಮ, ಭಾಷೆ, ಮೇಲೂ, ಕೀಳು, ಗಂಡು-ಹೆಣ್ಣು, ಗ್ರಾಮ, ನಗರಗಳ ಆಧಾರದಲ್ಲಿ ವಿಭಜಿಸುವ ಷಡ್ಯಂತ್ರ ನಡೆಯುತ್ತಿದೆ. ರಾಷ್ಟ್ರ ವೈರಿಗಳ ಈ ಪ್ರಯತ್ನದ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳುವ ಅಗತ್ಯವಿದೆ ನಾವೆಲ್ಲರೂ ಒಟ್ಟಾಗಿ ಇಂತಹ ಕೃತ್ಯವನ್ನು ಸೋಲಿಸಬೇಕಾಗಿದೆ ಎಂದು ಮೋದಿ ಎಚ್ಚರಿಸಿದರು.

ಜಾತಿ ಜನಗಣತಿಗೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಬೇಡಿಕೆಯ ನಡುವೆಯೇ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ತೀವ್ರಗೊಳಿಸಿದ್ದು, ಜಾತಿ ಮತ್ತು ಧರ್ಮದ ಆಧಾರದ ಮೇಲೆ ಅದು ಬಿರುಕು ಮೂಡಿಸುತ್ತಿದೆ ಎಂದು ಆರೋಪಿಸಿದ್ದಾರೆ. ಮಹಾರಾಷ್ಟ್ರ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು, ʻಏಕ್ ಹೈ, ತೋ ಸೇಫ್ ಹೈʼ ಎಂದು ಘೋಷಣೆ ನೀಡಿದ್ದರು. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಮತ್ತೆ ಸಂಕಷ್ಟ – FIR ದಾಖಲಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಕಾಂಗ್ರೆಸ್ ಆಡಳಿತದಲ್ಲಿ ಒಬಿಸಿಗಳು ಒಗ್ಗಟ್ಟಾಗಿರಲಿಲ್ಲ. ಕಾಂಗ್ರೆಸ್ ಅಧಿಕಾರದಿಂದ ಹೊರಗಿರುವಾಗ ಮಾತ್ರ ಒಬಿಸಿಗಳಿಗೆ ಮೀಸಲಾತಿ ಸಿಕ್ಕಿತು. ಒಬಿಸಿಗಳು ಒಗ್ಗೂಡಿದ ತಕ್ಷಣ, ಅಂತಿಮ ಪರಿಣಾಮವೆಂದರೆ ದೇಶದಲ್ಲಿ ಕಾಂಗ್ರೆಸ್ ತನ್ನ ಸರಳ ಬಹುಮತವನ್ನು ಕಳೆದುಕೊಂಡಿತು ಎಂದು ಪ್ರಧಾನಿ ಮೋದಿ ಹೇಳಿದರು. ಇದನ್ನೂ ಓದಿ: ದೆಹಲಿ, ಮುಂಬೈನಲ್ಲಿ ಈರುಳ್ಳಿ ದರ ಕೆ.ಜಿ. 80 ರೂ.ಗೆ ಏರಿಕೆ – 5 ವರ್ಷಗಳಲ್ಲೇ ಗರಿಷ್ಠ

Share This Article