ಇಂದು ಸಂಜೆ 4 ಗಂಟೆಗೆ ಅಲ್ಲ, ರಾತ್ರಿ 8 ಗಂಟೆಗೆ ಮೋದಿ ಭಾಷಣ

Public TV
1 Min Read

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8  ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಆರಂಭದಲ್ಲಿ ಸಂಜೆ 4 ಗಂಟೆಗೆ ರೇಡಿಯೂ ಮೂಲಕ  ಮಾತನಾಡಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈಗ ರಾತ್ರಿ 8 ಗಂಟೆಗೆ ಮಾತನಾಡಲಿದ್ದಾರೆ ಎಂದು ಅಧಿಕೃತವಾಗಿ ಪಿಎಂಒ ಇಂಡಿಯಾ ಟ್ವಿಟ್ಟರ್ ಹ್ಯಾಂಡಲ್ ತಿಳಿಸಿದೆ.

ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡುವುದಾಗಿ ತಿಳಿಸಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಂಗಡಿಸಿರುವುದರ ಕುರಿತು ವಿವರಿಸಲು ಇಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕಳೆದ ಬಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾರ್ಚ್ 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ತುರ್ತು ಭಾಷಣ ಮಾಡಿದ್ದರು. ಅಂತರಿಕ್ಷದಲ್ಲೇ ಸ್ಯಾಟಲೈಟ್‍ಗಳನ್ನು ಹೊಡೆದುರುಳಿಸುವ ಉಪಗ್ರಹ ವಿರೋಧಿ ಕ್ಷಿಪಣಿ (ಎ-ಸ್ಯಾಟ್) ಪರೀಕ್ಷೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ವಿಚಾರವನ್ನು ದೇಶವಾಸಿಗಳಿಗೆ ವಿವರಿಸಲು ಪ್ರಧಾನಿ ಮೋದಿ ಮಾತನಾಡಿದ್ದರು.

ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ನಿರ್ಣಯವನ್ನು ಸಂಸತ್‍ನಲ್ಲಿ ಅಂಗೀಕರಿಸಲಾಗಿದೆ. ಜಮ್ಮು ಕಾಶ್ಮೀರವನ್ನು ಎರಡು ಭಾಗಗಳಾಗಿ ವಿಂಗಡಿಸಿ, ಜಮ್ಮು ಕಾಶ್ಮೀರ ಮತ್ತು ಲಡಾಖ್ ಎಂದು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *