– ʻಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆʼಗೆ ಪ್ರಧಾನಿ ಮೋದಿ ಚಾಲನೆ
ಪಾಟ್ನಾ: ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಾಗಲೇ ಬಿಹಾರದ ಮಹಿಳೆಯರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi_ ಅವರಿಂದು ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ (Mukhyamantri Mahila Rojgar Yojana) ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ಈ ಯೋಜನೆಯ ಮೂಲಕ ಬಿಹಾರದಾದ್ಯಂತ (Bihar) 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ.ಗಳನ್ನು ನೇರವಾಗಿ ವರ್ಗಾಯಿಸಲಾಗುತ್ತಿದೆ. ಇದಕ್ಕಾಗಿ ಒಟ್ಟು 7,500 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. ಇದನ್ನೂ ಓದಿ: MiG-21 Retires | 6 ದಶಗಳ ಸೇವೆಗೆ ವಿದಾಯ – ʻಹಾರುವ ಶವಪೆಟ್ಟಿಗೆʼ ಮಿಗ್-21ಗೆ ಗುಡ್‌ಬೈ ಹೇಳಿದ ಭಾರತ
ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ಅವರ ಆಯ್ಕೆಯ ಜೀವನೋಪಾಯ ಚಟುವಟಿಕೆಗಳಿಗಾಗಿ ಆರ್ಥಿಕ ನೆರವು ನೀಡುವ ಮೂಲಕ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸಬಲೀಕರಣವನ್ನು ಉತ್ತೇಜಿಸುವುದು ಯೋಜನೆಯ ಉದ್ದೇಶವಾಗಿದೆ. ಕೃಷಿ, ಪಶುಸಂಗೋಪನೆ, ಕರಕುಶಲ ವಸ್ತುಗಳು, ಟೈಲರಿಂಗ್, ನೇಯ್ಗೆ ಮತ್ತು ಇತರ ಸಣ್ಣ-ಪ್ರಮಾಣದ ಉದ್ಯಮಗಳನ್ನು ಮಹಿಳೆಯರು ನಡೆಸಬಹುದು, ನಂತರದ ಹಂತಗಳಲ್ಲಿ 2 ಲಕ್ಷ ರೂ.ಗಳವರೆಗೆ ಹೆಚ್ಚುವರಿ ಆರ್ಥಿಕ ನೆರವು ದೊರೆಯುವ ಸಾಧ್ಯತೆ ಇದೆ.
ಯೋಜನೆಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಪ್ರಧಾನಿ ಮೋದಿ, ನವರಾತ್ರಿಯ ಈ ಶುಭ ಸಂದರ್ಭದಲ್ಲಿ ಬಿಹಾರದ ಮಹಿಳೆಯರ ಸಂತೋಷದಲ್ಲಿ ಪಾಲ್ಗೊಳ್ಳಲು ನನಗೆ ಹರ್ಷವಾಗುತ್ತಿದೆ. ನಾನು ಪರದೆಯ ಮೇಲೆ ಲಕ್ಷಾಂತರ ಮಹಿಳೆಯರನ್ನ ನೋಡುತ್ತಿದ್ದೇನೆ. ಅವರ ಆಶೀರ್ವಾದ ನಮಗೆಲ್ಲರಿಗೂ ಶಕ್ತಿಯ ಮೂಲವಾಗಿದೆ. ಅವರೆಲ್ಲರಿಗೂ ನನ್ನ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: IAF ಗ್ರೂಪ್ ಕ್ಯಾಪ್ಟನ್ ಕಳಿಸಿದ ಮೇಲ್‌ನಿಂದ ಚೈತನ್ಯಾನಂದನ ಕಾಮಪುರಾಣ ಬಯಲಾಯ್ತು!
ಬಿಹಾರ ಸಿಎಂ ನಿತೀಶ್ ಕುಮಾರ್ ಮಾತನಾಡಿ, ಪ್ರಧಾನಿ ನಿಮಗಾಗಿ ಬಹಳಷ್ಟು ಕೆಲಸ ಮಾಡ್ತಿದ್ದಾರೆ. ಹಿಂದಿನ ಸರ್ಕಾರ ಮಹಿಳೆಯರ ಪರ ಇರಲಿಲ್ಲ. ಲಾಲು ಪ್ರಸಾದ್ ಯಾದವ್ ಪದಚ್ಯುತಗೊಳಿಸಿದಾಗ, ಅವರು ತಮ್ಮ ಪತ್ನಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು. ಅವರು ತಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸಿದ್ದರು. ಆದ್ರೆ ನಾವು ನಮ್ಮ ಕುಟುಂಬಗಳನ್ನ ನೋಡಿಕೊಳ್ಳುವುದಿಲ್ಲ, ಬದಲಾಗಿ ಇಡೀ ಬಿಹಾರಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: 1.22 ಲಕ್ಷ ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ

