76ನೇ ಗಣರಾಜ್ಯೋತ್ಸವ ಸಂಭ್ರಮ – ಈ ವರ್ಷವೂ ಗಮನಸೆಳೆದ ಮೋದಿ ಪೇಟ

Public TV
1 Min Read

ನವದೆಹಲಿ: 76ನೇ ಗಣರಾಜ್ಯೋತ್ಸವ (Republic Day 2025) ಸಂಭ್ರಮದ ವೇಳೆ ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿಯವರ ಪೇಟ (Modi Turban) ಗಮನಸೆಳೆದಿದೆ.

ವಾಸ್ತವವಾಗಿ ಪ್ರಧಾನಿಯವರು (PM Modi) ದೇಶದ ವಿವಿಧ ಭಾಗಗಳಿಗೆ ಭೇಟಿ ನೀಡಿದಾಗ ಅಲ್ಲಿನ ಸಂಸ್ಕೃತಿಗೆ ತಕ್ಕಂತೆ ಉಡುಗೆ-ತೊಡುಗೆ ಧರಿಸುವ ಮೂಲಕ ಗಮನ ಸೆಳೆಯುವ ಹಾಗೂ ಅಲ್ಲಿನ ಸಂಸ್ಕೃತಿಗೆ ಗೌರವ ಕೊಡುವ ಕೆಲಸ ಮಾಡುತ್ತಾರೆ. ಇದನ್ನೂ ಓದಿ: ತುಮಕೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ: ಪರಮೇಶ್ವರ್

ಭಾರತದ ವೈವಿಧ್ಯತೆಯನ್ನು ಸಂಕೇತಿಸುವ ಹಳದಿ ಮತ್ತು ಕೆಂಪು ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಈ ಬಾರಿ ಧರಿಸಿದ್ದರು. ಜೊತೆಗೆ ಜೊತೆಗೆ ಕಪ್ಪು ಕಂದು ಬಣ್ಣದ ಜಾಕೆಟ್, ಬಂದಗಾಲ ಪೈಜಾಮಾ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದರು.

ಪ್ರತಿ ಬಾರಿಯೂ ಪ್ರಧಾನಿಯವರ ಪೇಟ ಆಕರ್ಷಕವಾಗಿರುತ್ತದೆ. ಈ ಬಾರಿ ಪ್ರಧಾನಿಯವರು ಯಾವ ಬಣ್ಣದ ಪೇಟ ತೊಡುತ್ತಾರೆ ಎಂಬ ಕುತೂಹಲ ಜನರಲ್ಲಿ ಇತ್ತು. ಅಂತೆಯೇ ಇಂದು ಗಣರಾಜ್ಯೋತ್ಸವ ಪರೇಡ್‌ಗೂ ಮುನ್ನ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆಯೇ ಅವರು ಧರಿಸಿರುವ ಉಡುಪಿನ ಫಸ್ಟ್ ಲುಕ್ ಬಹಿರಂಗವಾಯಿತು.

ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯೋತ್ಸವದ 2 ಸಂದರ್ಭಗಳಲ್ಲಿ ಪ್ರಧಾನಿಯವರ ಉಡುಗೆಯ ಆಯ್ಕೆಯು ಹೆಚ್ಚಿನ ಗಮನವನ್ನು ಸೆಳೆಯುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಪ್ರಧಾನಿಯವರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸುತ್ತಾರೆ. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವ – ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ, ಸೇನಾ ಶಕ್ತಿ ಪ್ರದರ್ಶನ

Share This Article