ಪ್ರಧಾನಿ ಮೋದಿ ಭದ್ರತಾ ವೈಫಲ್ಯ -150 ಅಪರಿಚಿತರ ವಿರುದ್ಧ ಎಫ್‌ಐಆರ್‌

Public TV
1 Min Read

ಚಂಡೀಗಢ: ಪ್ರಧಾನಿ ಮೋದಿ ಅವರು ಪಂಜಾಬ್‌ಗೆ ತೆರಳಿದ್ದ ಸಂದರ್ಭದಲ್ಲಿ ಫಿರೋಜ್‌ಪುರ್‌ ಫ್ಲೈಓವರ್‌ ಬಳಿ ಸಿಲುಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ ಪೊಲೀಸರು 150 ಮಂದಿ ಅಪರಿಚಿತರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 283ರಡಿ ಎಫ್‌ಐಆರ್‌ ದಾಖಲಾಗಿದೆ. ಯಾವುದೇ ಸಾರ್ವಜನಿಕ ಮಾರ್ಗದಲ್ಲಿ ಯಾವುದೇ ವ್ಯಕ್ತಿಗೆ ಅಪಾಯ, ಅಡಚಣೆ ಅಥವಾ ಗಾಯವನ್ನು ಉಂಟು ಮಾಡಿದರೆ ಅಂತಹವರು ಶಿಕ್ಷೆಗೆ ಗುರಿಯಾಗುತ್ತಾರೆ. 200 ರೂ. ವರೆಗೆ ದಂಡವನ್ನೂ ವಿಧಿಸಬಹುದಾಗಿದೆ. ಇದನ್ನೂ ಓದಿ: ಪ್ರಧಾನ ಮಂತ್ರಿ ಭದ್ರತಾ ಸಿದ್ಧತೆ ಹೇಗಿರುತ್ತೆ ಗೊತ್ತಾ?

ಪ್ರಧಾನಿಗೆ ಭದ್ರತಾ ವೈಫಲ್ಯ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಪಂಜಾಬ್‌ ಸರ್ಕಾರ, ಇಬ್ಬರು ಸದಸ್ಯರನ್ನೊಳಗೊಂಡ ಸಮಿತಿ ರಚಿಸಿತ್ತು. ಸಮಿತಿಯು ನೀಡಿದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 150 ಮಂದಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ವರದಿಯಲ್ಲಿ ತಿಳಿಸಿದೆ.

ಪ್ರಕರಣದ ತನಿಖೆಗೆ ಕೇಂದ್ರ ಸರ್ಕಾರವೂ ಸಹ ಮೂವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದೆ. ಸಮಿತಿಯು ತನಿಖೆಯನ್ನು ಈಗಾಗಲೇ ಆರಂಭಿಸಿದೆ. ಇದನ್ನೂ ಓದಿ: ಪ್ರಧಾನಿ ಕಾರು ಸಿಲುಕಿದ್ದ ಸ್ಥಳದಲ್ಲಿ ಬಿಜೆಪಿ ಕಾರ್ಯಕರ್ತರ ದಂಡು – ವೀಡಿಯೋ ವೈರಲ್‌

ಪಂಜಾಬ್‌ನಲ್ಲಿ ರ‍್ಯಾಲಿಯೊಂದರಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ಆಗಮಿಸಿದ್ದರು. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ನಲ್ಲಿ ರ‍್ಯಾಲಿ ಸ್ಥಳಕ್ಕೆ ಆಗಮಿಸಲು ಸಾಧ್ಯವಾಗಿರಲಿಲ್ಲ. ಆಗ ರಸ್ತೆ ಮಾರ್ಗವಾಗಿ ಆಗಮಿಸುತ್ತಿದ್ದಾಗ ಫಿರೋಜ್‌ಪುರ್‌ ಫ್ಲೈಓವರ್‌ ಬಳಿ ಪ್ರತಿಭಟನೆ ಕಾರಣದಿಂದಾಗಿ ಪ್ರಧಾನಿಯವರು ಸಿಲುಕಿಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *