ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್

Public TV
1 Min Read

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಪದವಿಯ ವಿವರಗಳನ್ನು ಬಹಿರಂಗಪಡಿಸುವ ಅವಶ್ಯಕತೆ ಇಲ್ಲ ಎಂದು ದೆಹಲಿ ಹೈಕೋರ್ಟ್ (Delhi High Court) ತೀರ್ಪು ನೀಡಿದೆ. ಇದೇ ವೇಳೆ ಮಾಹಿತಿ ಬಿಡುಗಡೆಗೆ ನಿರ್ದೇಶನ ನೀಡಿದ್ದ ಕೇಂದ್ರ ಮಾಹಿತಿ ಆಯೋಗದ ಆದೇಶವನ್ನು ರದ್ದುಗೊಳಿಸಿದೆ.

2016 ರಲ್ಲಿ ಕೇಂದ್ರ ಮಾಹಿತಿ ಆಯೋಗ (Central Information Commission) 1978 ರಲ್ಲಿ ದೆಹಲಿ ವಿವಿಯಲ್ಲಿ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡಿತ್ತು. ಇದೇ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಹೇಳಲಾಗಿತ್ತು. ದೆಹಲಿ ವಿಶ್ವವಿದ್ಯಾಲಯವು ಸಿಐಸಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

ಸೋಮವಾರ ತನ್ನ ಅಂತಿಮ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಸಚಿನ್ ದತ್ತಾ ಅವರಿದ್ದ ಪೀಠ, ವೈಯಕ್ತಿಕ ಮಾಹಿತಿಯ ಬಹಿರಂಗಗೊಳಿಸುವಿಕೆಯು ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಬಹುದು ಎಂದು ಹೇಳಿದೆ. ಈ ಸಂದರ್ಭದಲ್ಲಿ, ಮಾಹಿತಿ ಬಹಿರಂಗಗೊಳಿಸುವುದು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ ಎಂದು ಕೋರ್ಟ್ ಒತ್ತಿ ಹೇಳಿದೆ. ಇದನ್ನೂ ಓದಿ: ಶ್ರೀಮಂತ ಗಣಪನಿಗೆ ಈ ಬಾರಿ 474 ಕೋಟಿ ರೂ. ವಿಮೆ – ಏನಿದ್ರ ವಿಶೇಷತೆ ಅಂತೀರಾ?

ದೆಹಲಿ ವಿಶ್ವವಿದ್ಯಾಲಯವು, ಪ್ರಧಾನಿ ಮೋದಿಯವರ ಶೈಕ್ಷಣಿಕ ದಾಖಲೆಗಳನ್ನು ಬಹಿರಂಗಪಡಿಸುವುದು ಗೌಪ್ಯತೆಯ ಉಲ್ಲಂಘನೆಯಾಗುತ್ತದೆ ಎಂದು ವಾದಿಸಿತು. ಈ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿದೆ. ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ, ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸುವುದು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿರಬೇಕು ಎಂದು ನ್ಯಾಯಾಲಯ ತಿಳಿಸಿದೆ. ಈ ಪ್ರಕರಣದಲ್ಲಿ, ಅಂತಹ ಯಾವುದೇ ಹಿತಾಸಕ್ತಿ ಕಂಡುಬಂದಿಲ್ಲ ಎಂದು ಕೋರ್ಟ್ ಹೇಳಿದೆ.

Share This Article